riffle

 

 

ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಚಿಕ್ಕಮಗಳೂರು ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ.

ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ 37 ರಲ್ಲಿ  ಕೂತನ್ಕುಲ್ ಎಸ್ಟೇಟ್ ನಲ್ಲಿ ಇಂದು ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ  ಶಿಖಾರಿ ಮಾಡಿದ್ದ.

ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ  ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ  ದೇವಯ್ಯ ರನ್ನು ಬಂಧಿಸಿ ವನ್ಯಜೀವಿ ಸಾಂಬಾರ್ ಜಿಂಕೆಯ ಅಂದಾಜು 40 kg ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ 2 ರೈಫಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಒಂಟಿ ನಳಿಕೆ ರೈಫಲ್ ಹಾಗೂ ಐವತ್ತಕ್ಕೂ ಹೆಚ್ಚು ಜೀವಂತ ಬಳಸಿದ ಗುಂಡು ಪತ್ತೆಯಾಗಿದೆ. ವನ್ಯಜೀವಿ  ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ವಲಯ ಅರಣ್ಯಾಧಿಕಾರಿ ವೆಂಕಟೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರಹಾರ್ಶ್, ಪೂರಪ್ಪ ಮತ್ತು ಇತರರು ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ