76 ನೇ ಗಣರಾಜೋತ್ಸವ ಸಮಾರಂಭದ ಪೂರ್ವಭಾವಿ ಸಭೆ ಶನಿವಾರ ಮೂಡಿಗೆರೆಯ ತಹಶಿಲ್ದಾರ್ ಕಚೇರಿಯಲ್ಲಿ ಶಾಸಕಿ ನಯನಾ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ತಹಸೀಲ್ದಾರ್ ರಾಜಶೇಖರ ಮೂರ್ತಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ದಯಾವತಿ ಸೇರಿದಮತೆ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ನಯನಾ ಮೋಟಮ್ಮ ಅವರು ಈ ಬಾರಿ ಗಣರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ನೆರವೇರಿಸಬೇಕು. ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಪಟ್ಟಣದಲ್ಲಿ ಸ್ತಬ್ದಚಿತ್ರಗಳೊಂದಿಗೆ ಆಕರ್ಷಕ ಮೆರವಣಿಗೆ ಹಮ್ಮಿಕೊಳ್ಳಬೇಕು, ಇದಕ್ಕೆ ಎಲ್ಲಾ ಇಲಾಖೆಗಳು ಸಹಕಾರ ನೀಡಬೇಕು ಎಂದು ಹೇಳಿದರು.



