kotekar

 

 

ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.

ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಇಂದು ತಮಿಳುನಾಡಿನ ಮಧುರೈ ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರು ಆರೋಪಿಗಳನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಬಂಧಿತ ಆರೋಪಿಗಳಾಗಿದ್ದು, ಅವರಿಂದ 2 ಗೋಣಿಚೀಲ, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಅವರು ಮಾಹಿತಿ ನೀಡಿದ್ದಾರೆ.

ಜನವರಿ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿರುವ ಸಹಕಾರಿ ಬ್ಯಾಂಕ್ ಗೆ ಹಾಡಹಗಲೇ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದರು.

ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್​​ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು.

ಬ್ಯಾಂಕ್ ದರೋಡೆ ಬಳಿಕ ಆರೋಪಿಗಳು ಕೇರಳ ಮೂಲಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು. ಬ್ಯಾಂಕ್ ದರೋಡೆಗೆ ಸ್ಥಳೀಯರು ಸಹಾಯ ಮಾಡಿರುವ ಸಾಧ್ಯತೆ ಇದೆ. ಸ್ಥಳೀಯರ ಬೆಂಬಲ ಇಲ್ಲದೆ ಈ ಕೃತ್ಯ ಮಾಡಲು ಸಾಧ್ಯವಿಲ್ಲ. ಬಂಧಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ : ಬರೊಬ್ಬರಿ 12 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದೋಚಿರುವ ದುಷ್ಕರ್ಮಿಗಳು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ