ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಸಮೀಪ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ಕುಮಂದಿ ಗಾಯಗೊಂಡಿದ್ದಾರೆ.
ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಕೌಸರ್ ಅಂಗಡಿ ಎದುರಿನ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಓಮಿನಿ ಕಾರೊಂದು ಲಾರಿ ಮತ್ತು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.
ಜನ್ನಾಪುರ ಕಡೆಯಿಂದ ಮೂಡಿಗೆರೆ ಕಡೆಗೆ ವೇಗವಾಗಿ ಬಂದ ಓಮಿನಿ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ನಂತರ ಎದರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ನಿಂತಿದೆ. ಇದರಿಂದಾಗಿ ಬೈಕಿನ ಹಿಂಬದಿಯಲ್ಲಿ ಕುಳಿತ್ತಿದ್ದ ಮಹಿಳೆಯೋರ್ವರಿಗೆ ಹಾಗೂ ಓಮಿನಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಹಾಗೂ ಓಮಿನಿ ಚಾಲಕನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಡಿಕ್ಕಿಯ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೈಕಿಗೂ ಸಹ ಹಾನಿಯಾಗಿದೆ. ಗಾಯಾಳುಗಳನ್ನು ತಕ್ಷಣ ಮೂಡಿಗೆರೆ ಆಸ್ಪತ್ರೆಗೆ ಸಾಗಿಸಲಾಗಿದೆ.
ಗಾಯಗೊಂಡವರನ್ನು ಬೈಕ್ ನಲ್ಲಿ ಬರುತ್ತಿದ್ದ ಜನ್ನಾಪುರ ಎಲೈಟ್ ಮೈಂಡ್ ಶಾಲೆ ಶಿಕ್ಷಕ ನಾಗೇಶ್ ಮತ್ತು ಶಿಕ್ಷಕಿ ತೇಜಸ್ವಿನಿ ಹಾಗೂ ಓಮಿನಿ ಚಾಲಕ ಸಯ್ಯದ್ ಮತ್ತು ಅವರ ಪತ್ನಿ ತಾಜುನ್ ಎಂದು ತಿಳಿದುಬಂದಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಪಘಾತದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.



