ಬಂಟ್ವಾಳ: ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ ಅಂತರಾಜ್ಯ ದರೋಡೆಕೋರನನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಬಂಧಿಸಿ, ಕೃತ್ಯಕ್ಕೆ ಉಪಯೋಗಿಸಿದ ಎರ್ಟಿಗಾ ಕಾರು, 5,00,000 ರೂ ನಗದು ಹಾಗೂ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ ನಂಬರ ಪ್ಲೇಟ್‌ನ್ನು ವಶಪಡಿಸಿಕೊಳ್ಳಲಾಗಿದೆ.
ಬಂಟ್ವಾಳ ತಾಲೂಕು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಬೀಡಿ ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಯಿತು.ಪ್ರಕರಣದಲ್ಲಿ ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಕಾರ್ಯಚರಣೆ ನಡೆದಿದೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸುತ್ತಿದೆ.
ಬಂಟ್ವಾಳ : ಇ.ಡಿ. ಅಧಿಕಾರಿಗಳ ವೇಷದಲ್ಲಿ ಬೀಡಿ ಉದ್ಯಮಿ ಮನೆ ಮೇಲೆ ದಾಳಿ ; 30 ಲಕ್ಷ ದೋಚಿ ಪರಾರಿಯಾಗಿರುವ ಖದೀಮರು



