b hosalli 2

 

 

ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಬಿ. ಹೊಸಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜನವರಿ 26 ರಂದು ಸಮಾನತೆಯ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಂ. ಆಶ್ರೀತ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು ;  75ನೇ ಗೆ ಗಣರಾಜ್ಯೋತ್ಸವದ ಸವಿನೆನಪಿಗಾಗಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಆದರ್ಶಗಳು ಮತ್ತು ಸಂವಿಧಾನ ಬದ್ಧತೆ ಸೇರಿದಂತೆ ಬುದ್ಧ ಬಸವ ಶಿಶುನಾಳ ಶರೀಫ ನಾರಾಯಣಗುರುಗಳು ಕನಕದಾಸರು ಸೇರಿದಂತೆ ವಿಶ್ವ ಮಾನವ ಕುವೆಂಪು ಅವರ ಸಮಾನತೆಯ ವಿಚಾರಧಾರೆಗಳನ್ನು ಈ ಸಮಾಜದ ತಳಮಟ್ಟದ ಗ್ರಾಮೀಣ ಪ್ರದೇಶದ ಜನಸಮುದಾಯಕ್ಕೆ ತಿಳಿಸುವ ಸಲುವಾಗಿ ಸಮಾನತೆಯ ಸಂಗಮ ಎನ್ನುವ ಹೆಸರಿನಲ್ಲಿ ಕಾರ್ಯಕ್ರಮವನ್ನ ಆಯೋಜಿಸಿದ್ದೇವೆಂದು ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ  ಚಿಂತಕರು ವಾಗ್ಮಿಗಳಾದ ಸುದೀರ್ ಕುಮಾರ್ ಮುರೋಳ್ಳಿ ಅವರು ಉಪನ್ಯಾಸ ನೀಡಲಿದ್ದು. ಮಾಜಿ ಸಚಿವೆ ಮೊಟಮ್ಮ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ .  ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು, ಶಾಸಕಿ ನಯನಾ ಮೋಟಮ್ಮ. ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೆ ಗೌಡ. ಮಾಜಿಸಚಿವರದ ಬಿ.ಬಿ. ನಿಂಗಯ್ಯ. ಮಾಜಿ ಶಾಸಕರ ಎಂ.ಪಿ. ಕುಮಾರ ಸ್ವಾಮಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ವಿವಿಧ ಸಂಘಟನೆಗಳ ಪ್ರಮುಖರು. ರಾಜಕೀಯ ಧುರೀಣರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ