gutthi 2

 

 

ಮೂಡಿಗೆರೆ ತಾಲ್ಲೂಕಿನ ತ್ರಿಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಗುತ್ತಿಹಳ್ಳಿ ಗುತ್ತಿ ಇದರ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಹೆಚ್.ಎ. ಸುನಿಲ್ ಕುಮಾರ್ ಹೆಸಗೋಡು ಹಾಗೂ ಉಪಾಧ್ಯಕ್ಷರಾಗಿ ಹೆಚ್.ಆರ್. ಕಿರಣ್(ರಂಜಿತ್ ಗುತ್ತಿಹಳ್ಳಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬೇರಾರು ನಾಮಪತ್ರ ಸಲ್ಲಿಸದೇ ಇದ್ದುದ್ದರಿಂದ ಹೆಚ್.ಎ. ಸುನಿಲ್ ಕುಮಾರ್ ಅಧ್ಯಕ್ಷರಾಗಿ ಮತ್ತು ಹೆಚ್.ಆರ್. ಕಿರಣ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅಧ್ಯಕ್ಷ ಸುನಿಲ್ ಕುಮಾರ್ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿ ; ತ್ರಿಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುತ್ತಿಹಳ್ಳಿ, ಗುತ್ತಿ ಮೂಡಿಗೆರೆ ತಾಲ್ಲೂಕಿನ ಅತಿಹೆಚ್ಚು ಮಳೆಬೀಳುವ ಪ್ರದೇಶದಲ್ಲಿ ಇದ್ದು, ಇಲ್ಲಿನ ರೈತರ ಕೃಷಿ ಮತ್ತು ಆರ್ಥಿಕ ಚಟುವಟಿಕೆಗೆ ಸಂಘ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ. ಬೆಳೆಸಾಲ, ವಾಹನ ಸಾಲ, ಜಾಮೀನು ಸಾಲ, ಸ್ವಂತ ಬಂಡವಾಳ ಸಾಲ ಹೀಗೆ ಹಲವು ರೀತಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗಿದೆ. ಹಾಗೆಯೇ ರೈತರಿಗೆ ಬೇಕಾದ ಗೊಬ್ಬರ, ಸಾರ್ಜಜನಿಕ ಪಡಿತರ ವಿತರಣೆ ಸೇವೆಯನ್ನು ಒದಗಿಸಲಾಗುತ್ತಿದೆ. ಸಂಘದ ಈ ಹಿಂದಿನ ಎಲ್ಲಾ ಹಿರಿಯ ಸಹಕಾರಿಗಳ ಸೇವಾ ಮನೋಭಾವನೆಯ ಕಾರ್ಯವೈಖರಿಯಿಂದ ಮತ್ತು ಸಿಬ್ಬಂದಿಗಳ ಕಾರ್ಯನಿಷ್ಠೆಯಿಂದ ಹೆಚ್ಚಿನ ಅಭಿವೃದ್ಧಿ ಸಾಧಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿಯೂ ರೈತರಿಗೆ ಇನ್ನೂ ಹೆಚ್ಚಿನ ಸೇವೆ ಒದಗಿಸಿ ಸಂಘದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಚನ್ನಕೇಶವಗೌಡ. ಟಿ.ಎನ್, ಯದುವೀರ್ ಜಿ.ಕೆ., ಸುದೇವ್. ಜಿ.ಎಸ್.. ಸಂಪತ್. ಪಿ.ಎಂ, ಮಮತ ಬಿ.ಸಿ., ರಾಧಾ ಕೆ.ಎನ್., ಅರುಣ್ ಕೆ.ಸಿ., ಪರಮೇಶ್ ಜಿ.ಜಿ., ಮಧು ಎಂ.ಬಿ., ರುದ್ರಯ್ಯ ಜಿ.ಎಂ. ಉಪಸ್ಥಿತರಿದ್ದರು.


ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ವಿವಿಧ ಪಕ್ಷಗಳ ಮತ್ತು ಸಂಘಸಂಸ್ಥೆಗಳ ಮುಖಂಡರು ಅಭಿನಂದಿಸಿದರು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ