charmadi 1

 

 

ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದೆ

ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್(ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಬೆಂಕಿಯ ಕೆನ್ನಾಲಿಗೆ 10 ಕಿಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಗಂಟೆಗಳೇ ಕಳೆದರೂ ತಹಬದಿಗೆ ಬಂದಿದ್ದ, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಪರದಾಡಿದರು.

ಈಗ್ಗೆ ಎರಡು ದಿನದ ಹಿಂದೆ ಚಾರ್ಮಾಡಿ ಬಿದಿರುತಳ ಗುಡ್ಡಕ್ಕೆ ಬೆಂಕಿ ಬಿದ್ದು ಬಾರೀ ಪ್ರಮಾಣದ ಅರಣ್ಯ ನಾಶವಾಗಿತ್ತು. ಇದರ ಬಗ್ಗೆ ಸ್ವತಃ ರಾಜ್ಯದ ಅರಣ್ಯ ಸಚಿವರೇ ವರದಿ ನೀಡುವಂತೆ ಆದೇಶ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ