ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪದ ಕೂದುವಳ್ಳಿ ಗ್ರಾಮದ ಕೃಷಿಕ ಕೆ. ಎಲ್. ಹೂವೇಗೌಡ ಇಂದು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ.
ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಸ್ಥಳದಲ್ಲಿ ಸಾವನಪ್ಪಿದ್ದಾರೆ.
ಇತ್ತೀಚಿಗಷ್ಟೇ ಹೂವೆಗೌಡರ ಮಗ ಟ್ಯಾಕ್ಟರ್ ಅಪಘಾತದದಿಂದ ಗಂಭೀರ ಗಾಯಗಳಾಗಿದ್ದು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ತನ್ನ ಮಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿಯೇ
ತಂದೆ ವಿದ್ಯುತ್ ಸ್ಪರ್ಶದಿಂದ ಅಕಾಲಿಕವಾಗಿ ಅಸುನೀಗಿದ್ದಾರೆ.
ಮೃತರು ಮಡದಿ, ಮಗ ಸೇರಿದಂತೆ ಅಪಾರ ಬಂಧು ಬಳಗ ಕುಟುಂಬವನ್ನು ಅಗಲಿದ್ದಾರೆ.
ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


