76ನೇ ಗಣರಾಜ್ಯೋತ್ಸವದ ಅಂಗವಾಗಿ ಮೂಡಿಗೆರೆಯ ಕರಾಟೆ ಶಿಕ್ಷಕರಾದ ಸೆನ್ಸಾಯ್ ರಾಜೇಂದ್ರನ್ ಹಾಗು ಸೆನ್ಸಾಯ್ ಬೇಬಿಲತಾ ಇವರನ್ನು ಹೆಸಗಲ್ ಗ್ರಾಮ ಪಂಚಾಯಿತಿಯಲ್ಲಿ ಸನ್ಮಾನಿಸಲಾಯಿತು.
ಸೆನ್ಸಾಯ್ ರಾಜೇಂದ್ರನ್ ಹಾಗು ಸೆನ್ಸಾಯ್ ಬೇಬಿಲತಾ ಇವರು ಅನೇಕ ವರ್ಷಗಳಿಂದ ಮೂಡಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಸ್ವಯಂ ರಕ್ಷಣೆಯ ತರಬೇತಿ ನೀಡಿತ್ತಾ ಬರುತ್ತಿದ್ದಾರೆ. ಇವರಿಂದ ತರಬೇತಿ ಪಡೆದ ಅನೇಕ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಉತ್ತಮ ದೈಹಿಕ ಸಾಮರ್ಥ್ಯವನ್ನು ಹೊಂದಿ ಆರೋಗ್ಯಪೂರ್ಣವಾದ ಸಕಾರಾತ್ಮಕ ವ್ಯಕ್ತಿತ್ವ ಬೆಳೆಸಿಕೊಳ್ಳಲು ಇವರು ಮಾರ್ಗದರ್ಶನ ನೀಡುತ್ತಿದ್ದಾರೆ. ಇವರ ಈ ಸೇವೆಯನ್ನು ಗುರುತಿಸಿ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಗಿದೆ.
ಕಾರ್ಯಕ್ರಮದಲ್ಲಿ ಹೆಸಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ನಜ್ಮಾ ಬೇಗಂ, ಪಿಡಿಓ ಶ್ರೀಮತಿ ಸೌಮ್ಯ, ಪಂಚಾಯಿತಿಯ ಸರ್ವ ಸದಸ್ಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.



