ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೇಸ್ ಮುಖಂಡ ಬಿ.ಎಸ್.ಜಯರಾಂ ಬಿದರಹಳ್ಳಿ ನೇಮಕವಾಗಿದ್ದಾರೆ.
ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದ್ದು, ಬಿ.ಎಸ್. ಜಯರಾಂ ಅವರ ಅಧ್ಯಕ್ಷತೆಯಲ್ಲಿ ಒಟ್ಟು 16 ಸದಸ್ಯರ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.
ಸಮಿತಿಯ ವಿವರ :
ಅಧ್ಯಕ್ಷರು : ಬಿ.ಎಸ್. ಜಯರಾಂ
ಸದಸ್ಯರುಗಳು :
ಹೆಚ್.ಪಿ.ರಮೇಶ್ ಹೊಸ್ಕೆರೆ, ಚಂದ್ರಯ್ಯ ಸಬ್ಲಿ, ಗುರುವಪ್ಪ, ನಾರಾಯಣ ನಿಡಗೋಡು, ಶ್ರೀನಿವಾಸ ಕುನ್ನಹಳ್ಳಿ, ನವೀನ್ ಕೆಂಜಿಗೆ, ಶಿವಸಾಗರ್ ತೇಜಸ್ವಿ, ಶ್ರೀಮತಿ ಲೀಲಾವತಿ ಬಣಕಲ್, ದೀಕ್ಷಿತ್ ಹಾಲೂರು, ಭರತ್ ಬಿಳಗುಳ, ಶ್ರೀಮತಿ ಜಯಮ್ಮ, ಇರ್ಫಾನ್ ಬಣಕಲ್, ಜಿ.ಬಿ. ಅರುಣ್ ಗುತ್ತಿ, ಮೆಲ್ವಿನ್, ಹಾಗೂ ಮೂಡಿಗೆರೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು.
ಸಮಿತಿಯ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ಎಸ್. ಜಯರಾಂ ಬಿದರಹಳ್ಳಿ ಅವರು ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರಾಗಿದ್ದು, ಪಕ್ಷದಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. ಮೂಡಿಗೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ, ಜಿಲ್ಲಾ ಸಮಿತಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕಾಫಿ ಉದ್ದಿಮೆಯ ಪರವಾಗಿ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬರುತ್ತಿದ್ದಾರೆ. ಮೂಡಿಗೆರೆ ಲಯನ್ಸ್ ಸಂಸ್ಥೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ ; ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಬಡವರಿಗೆ, ಮಹಿಳೆಯರಿಗೆ, ಜನಸಾಮಾನ್ಯರಿಗೆ ತುಂಬಾ ಸಹಾಯಕವಾಗಿದೆ. ಮೂಡಿಗೆರೆ ತಾಲ್ಲೂಕಿನಲ್ಲಿ ಈ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮ ವಹಿಸಲಾಗುವುದು. ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದು, ಮೊದಲ ಹಂತವಾಗಿ ಜನವರಿ 30 ರಂದು ಗುರುವಾರ ಸಮಿತಿಯ ಮೊದಲ ಸಭೆ ನಡೆಸಲಾಗುತ್ತಿದ್ದು, ಅಲ್ಲಿ ಪ್ರಥಮ ಹಂತದಲ್ಲಿ ಚರ್ಚೆ ನಡೆಸಿ ಮುಂದೆ ಇಲಾಖವಾರು ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.



