women t 20

 

 

ಮಲೇಷ್ಯಾ ರಾಜಧಾನಿ ಕೌಲಾಲಂಪುರದಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸುಲಭವಾಗಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಹಿಂದೆ 2023ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲೂ ಟೀಂ ಇಂಡಿಯಾ, ಇಂಗ್ಲೆಂಡ್‌ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 82 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ವನಿತಾ ಪಡೆ 11.2 ಓವರ್​ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು.

ಈ ಟೂರ್ನಿಯಲ್ಲಿ ಕನ್ನಡತಿ ನಿಕ್ಕಿ ಪ್ರಸಾದ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಂ ಇಂಡಿಯಾದ ಪ್ರದರ್ಶನ ಸ್ಮರಣೀಯವಾಗಿತ್ತು. ಅದಕ್ಕೆ ಪೂರಕವಾಗಿ ಭಾರತ ತಂಡ ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಪ್ರಶಸ್ತಿ ಗೆದ್ದುಕೊಂಡಿದೆ. ಇನ್ನು ಉಭಯ ತಂಡಗಳ ನಡುವೆ ನಡೆದ ಈ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಆಫ್ರಿಕಾ ಮಹಿಳಾ ತಂಡ 20 ಓವರ್‌ಗಳಲ್ಲಿ ಕೇವಲ 82 ರನ್​ಗಳಿಗೆ ಆಲೌಟ್ ಆಯಿತು.

ಮತ್ತೊಂದೆಡೆ ಭಾರತ ಪರ ಬೌಲಿಂಗ್​ನಲ್ಲಿ ಮಿಂಚಿದ ಗೊಂಗಡಿ ತ್ರಿಶಾ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್ ಪಡೆದರು. ಇವರಲ್ಲದೆ ವೈಷ್ಣವಿ ಶರ್ಮಾ, ಆಯುಷಿ ಶುಕ್ಲಾ ಮತ್ತು ಪರುಣಿಕಾ ಸಿಸೋಡಿಯಾ ತಲಾ 2 ವಿಕೆಟ್ ಪಡೆದರು. ಉಳಿದಂತೆ ಶಬ್ನಮ್ ಶಕೀಲ್ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಗೆಲುವಿಗೆ 83 ರನ್‌ಗಳ ಗುರಿ ಪಡೆದಿದ್ದ ಟೀಂ ಇಂಡಿಯಾಕ್ಕೆ ಆರಂಭಿಕರಾದ ಗೊಂಗಡಿ ತ್ರಿಶಾ ಮತ್ತು ಕಮಲಿನಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಉಭಯ ಆಟಗಾರರು ಮೊದಲ ವಿಕೆಟ್‌ಗೆ ಕೇವಲ 4.3 ಓವರ್‌ಗಳಲ್ಲಿ 36 ರನ್ ಕಲೆಹಾಕಿದರು. ಇದರಿಂದಾಗಿ ಭಾರತ ತಂಡ ಕೇವಲ 1 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ