geetha ajith1

 

 

ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಗೀತಾ ರಂಜನ್ ಅಜಿತ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ. ಕಳೆದ ಐದು ತಿಂಗಳ ಹಿಂದಷ್ಟೇ ಅಧ್ಯಕ್ಷ ಸ್ಥಾನಕ್ಕೆ ಏರಿದ್ದ ಗೀತಾ ಅವರು ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಟ್ಟಣ ಪಂಚಾಯಿತಿಯಲ್ಲಿ ಜೆಡಿಎಸ್ ನ ಏಕೈಕ ಸದಸ್ಯೆಯಾಗಿದ್ದ ಗೀತಾ ಅವರು ಕಾಂಗ್ರೇಸ್ ಬೆಂಬಲದೊಂದಿಗೆ ಅಧ್ಯಕ್ಷ ಸ್ಥಾನಕ್ಕೆ ಏರಿದ್ದರು.

11 ಸದಸ್ಯರಿರುವ ಪಟ್ಟಣ ಪಂಚಾಯಿತಿಯಲ್ಲಿ ಮೊದಲ ಅವಧಿಯಲ್ಲಿ 10 ತಿಂಗಳ ಅವಧಿಯಲ್ಲಿ ಬಿಜೆಪಿಯ ಪಿ.ಜಿ. ಅನುಕುಮಾ‌ರ್ ಹಾಗೂ ನಂತರ 20 ತಿಂಗಳು ಜೆ.ಬಿ. ಧರ್ಮಪಾಲ್ ಅಧ್ಯಕ್ಷರಾಗಿದ್ದರು.

2ನೇ ಅವಧಿಯಲ್ಲಿ 15 ತಿಂಗಳು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ಆಡಳಿತಾಧಿಕಾರಿ ನೇಮಿಸಲಾಗಿತ್ತು. ನಂತರದ 15 ತಿಂಗಳ ಅವಧಿಗೆ ಚುನಾವಣೆ ಸಂದರ್ಭದಲ್ಲಿ ಪಂಚಾಯಿತಿಯಲ್ಲಿ ಜೆಡಿಎಸ್‌ ಏಕೈಕ ಸದಸ್ಯೆಯಾಗಿರುವ ಗೀತಾರಂಜನ್‌ ಅಜಿತ್‌ಕುಮಾರ್ (ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ಕುಮಾರ್ ಅವರ ಪತ್ನಿ) ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು.

ಬಿಜೆಪಿ ಸದಸ್ಯ ಜಿ.ಬಿ. ಧರ್ಮಪಾಲ್ ಅವರು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದರಿಂದ ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾಗಿದ್ದ ಗೀತಾರಂಜನ್‌ ಅಧ್ಯಕ್ಷರಾಗಿದ್ದರು. ಕಾಂಗ್ರೇಸ್ ನ ರಮೇಶ್ ಹೊಸಕೆರೆ  ಉಪಾಧ್ಯಕ್ಷರಾಗಿದ್ದರು.

ಈ ವೇಳೆ   ಮೊದಲ 5 ತಿಂಗಳ ವಧಿಗೆ ಗೀತಾರಂಜನ್, ನಂತರದ 10ತಿಂಗಳ ಅವಧಿಗೆ ಕೆ. ವೆಂಕಟೇಶ್ ಅಧ್ಯಕ್ಷರಾಗುವಂತೆ ಆಂತರಿಕ ಒಪ್ಪಂದವೇರ್ಪಟ್ಟಿತ್ತು ಎನ್ನಲಾಗಿದೆ. ಅದರಂತೆ ಗೀತಾ ಅವರು ಅಧ್ಯಕ್ಷರಾಗಿ ಜನವರಿ 28ಕ್ಕೆ 5ತಿಂಗಳು ಪೂರ್ಣಗೊಂಡಿದೆ. ಫೆಬ್ರವರಿ 3ರಂದು ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಸದಸ್ಯರು ಸಭೆ ಸೇರಿದಾಗ, ಅಧ್ಯಕ್ಷರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದು. ಅದರಂತೆ ಚಿಕ್ಕಮಗಳೂರಿಗೆ ಹೋಗಿ ಉಪ ವಿಭಾಗಾಧಿಕಾರಿ ರಶ್ಮಿ ಅವರಿಗೆ ರಾಜೀನಾಮೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಗೀತಾ ಅವರು ಕಾಂಗ್ರೇಸ್ ಪಕ್ಷದಲ್ಲಿ ಆಗಿದ್ದ ಆಂತರಿಕ ಒಡಂಬಡಿಕೆಗೆ ಅನುಗುಣವಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನ್ನ ರಾಜೀನಾಮೆ ಇನ್ನೂ ಅಂಗೀಕಾರಕ್ಕೆ ಬಾಕಿ ಇದೆ.

ನನಗೆ ಸಿಕ್ಕಿದ 5 ತಿಂಗಳ ಅಲ್ಪ ಅವಧಿಯ ಅಧ್ಯಕ್ಷ ಸ್ಥಾನದಲ್ಲಿ ಪಟ್ಟಣದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ್ದೇನೆ. ಅನೇಕ ಅಭಿವೃದ್ಧಿ ಕಾರ್ಯಗಳು ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭದ ಹಂತದಲ್ಲಿವೆ. ಮುಂದೆ ಅಧ್ಯಕ್ಷರಾಗಿ ಬರುವವರು ಈ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು.  ಸಹಕಾರ ನೀಡಿದ ಬೆಂಬಲಿಸಿದ ಎಲ್ಲಾ ಸದಸ್ಯರು, ಪಕ್ಷದ ಮುಖಂಡರು, ಹಿತೈಷಿಗಳಿಗೆ ಗೀತಾ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ತಾವು ಮಾತಿನಂತೆ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಈ ನಡುವೆ ಪಟ್ಟಣ ಪಂಚಾಯಿತಿಯಲ್ಲಿ ಮತ್ತೆ ಅಧಿಕಾರ ಹಿಡಿಯಲು ಕಾಂಗ್ರೇಸ್ ಮತ್ತು ಬಿಜೆಪಿ ಕಸರತ್ತು ನಡೆಸುತ್ತಿವೆ. ಕಾಂಗ್ರೇಸ್ ಒಳಗಿನ ಒಪ್ಪಂದದಂತೆ ಹಿರಿಯ ಸದಸ್ಯ ಕೆ.ವೆಂಕಟೇಶ್ ಅವರಿಗೆ ಮುಂದಿನ ಅವಧಿಯ ಅಧ್ಯಕ್ಷ ಸ್ಥಾನ ನೀಡಬೇಕಾಗಿದೆ. ಇತ್ತ ಬಿಜೆಪಿ ಮರಳಿ ಅಧಿಕಾರ ಪಡೆಯಬೇಕು ಎಂದು ಕಸರತ್ತು ನಡೆಸಿದೆ. ಕಾಂಗ್ರೇಸ್ ಪಾಳಯದಿಂದ ಸದಸ್ಯರನ್ನು ಸೆಳೆಯುವುದು, ತಮ್ಮ ಪಕ್ಷದ ವಿಧಾನಪರಿಷತ್ ಸದಸ್ಯರು, ಸಂಸದರ ಬೆಂಬಲ ಪಡೆದು ಬಹುಮತ ಸಾಬೀತು ಮಾಡಲು ತೆರೆಮರೆಯ ಪ್ರಯತ್ನ ನಡೆಸಿದೆ ಎಂದು ತಿಳಿದುಬಂದಿದ್ದು, ಇದೀಗ ಗೀತಾ ಅವರ ರಾಜೀನಾಮೆಯಿಂದ ಮೂಡಿಗೆರೆ ಪಟ್ಟಣ ಪಂಚಾಯಿತಿ ಮತ್ತೊಮ್ಮೆ ರಾಜಕೀಯ ತಿರುವು ಪಡೆಯಲು ವೇದಿಕೆ ಸಜ್ಜುಕೊಂಡಂತಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ