ಮೀನು ಸಾಗಿಸುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಚಾಲಕನನ್ನು ದೋಚಿದ ಪ್ರಕರಣ ಮೂಡಿಗೆರೆಯ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಎರಡು ಬೈಕ್‍ನಲ್ಲಿ ಬಂದ ನಾಲ್ವರು ಅಪರಿಚಿತರು ಲಾರಿಯನ್ನು ಅಡ್ಡಗಟ್ಟಿದ್ದಾರೆ. ಬಳಿಕ ಗಾಜನ್ನು ಒಡೆದು ಚಾಲಕ ಸಲಾಂ ಬಣಕಲ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಬಳಿ ಇದ್ದ 1 ಲಕ್ಷದ 61 ಸಾವಿರ ರೂ. ಹಣವನ್ನು ದೋಚಿದ್ದಾರೆ.
ಈ ಸಂಬಂಧ 1.61 ಲಕ್ಷ ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ವಾಹನದ ಚಾಲಕ ಸಲಾಂ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಣಕಲ್ ಪೊಲೀಸರು ಪ್ರಕರಣದ ಪರಿಶೀಲನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಬ್ಯಾಂಕ್ ದರೋಡೆ, ಎಟಿಎಂ ದರೋಡೆ ಪ್ರಕರಣಗಳು ನಡೆಯುತ್ತಿರುವ ನಡುವೆ ಈಗ ಕಾಫಿನಾಡಿಗೂ ದರೋಡೆಕೋರರ ಹಾವಳಿ ಪ್ರಾರಂಭವಾಗಿದೆ.
ಕಾಫಿ ಕಳ್ಳತನ ಪ್ರಕರಣಗಳು ನಡೆಯುತ್ತಿರುವ ನಡುವೆಯೇ ಇದೀಗ ವಾಹನ ಅಡ್ಡಗಟ್ಟಿ ದರೋಡೆ ಮಾಡಿರುವ ಪ್ರಕರಣ ನಡೆದಿದೆ.
ಚಾರ್ಮಾಡಿ ಘಾಟ್ ನಲ್ಲಿ ಪೊಲೀಸ್ ಬೀಟ್ ಹೆಚ್ಚಿಸಬೇಕೆಂದು ಸ್ಥಳಿಯರ ಆಗ್ರಹಿಸಿದ್ದಾರೆ.



