ambedkar 4

 

 

ಆಲ್ದೂರು ಪಟ್ಟಣದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಸಮಾರಂಭ ಅದ್ದೂರಿಯಾರಿ ನೆರವೇರಿತು.

ಪಟ್ಟಣದ ಬಾಳೆಹೊನ್ನೂರು ರಸ್ತೆ ವೃತ್ತದಲ್ಲಿ ನಿರ್ಮಾಣ ಮಾಡಿರುವ ಅಂಬೇಡ್ಕರ್ ಅವರ ಬೃಹತ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಆಲ್ದೂರು ಮತ್ತು ಸುತ್ತಮುತ್ತಲಿನ ಗ್ರಾಮದ ಸರ್ವ ಜನಾಂಗದ ಜನರು ಭಾಗವಹಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಆಲ್ದೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿತ್ತು.

ಡಾ. ಅಂಬೇಡ್ಕರ್ ಅವರ ಪುತ್ಥಳಿ ಯನ್ನು ಶಾಸಕಿ ನಯನಮೋಟಮ್ಮ ಅನಾವರಣಗೊಳಿಸಿದರು. ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿ ಅನಾವರಣಕ್ಕೂ ಮೊದಲು ನೂರಾರು ಯುವಕರು ಬೈಕ್ ಜಾಥಾ ನಡೆಸಿದರು. ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಜಾಥಾಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಲ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು, ವಿವಿಧ ಸಂಘಟನೆ, ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಾಬಾಸಾಹೇಬರ ಪುತ್ಥಳಿ ಅನಾವರಣ ಸಂದರ್ಭದಲ್ಲಿ  ಕೆಸುಗೆ ಗ್ರಾಮದ ಶಾಲೆಯ ಮಕ್ಕಳು ಮಿಲಿಟರಿ ಸಮವಸ್ತ್ರ ಆಟಿಕೆಯ ಬಂದೂಕಿನೊಂದಿಗೆ ಆಗಮಿಸಿ ಮಹರ್ ರೆಜಿಮೆಂಟ್ ಅನ್ನು ಪ್ರತಿನಿಧಿಸಿ ವೇದಿಕೆ ಮೇಲೇರಿ ಸಾರ್ವಜನಿಕರ ಗಮನ ಸೆಳೆದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ