sahakara 1

 

 

ಚಿಕ್ಕಮಗಳೂರು ಜಿಲ್ಲಾ ಸಹಕಾರ (ಡಿಸಿಸಿ) ಬ್ಯಾಂಕ್ ನಿಂದ ಮೂಡಿಗೆರೆ ಹಾಗೂ ಕಳಸ ತಾಲ್ಲೂಕು ವ್ಯಾಪ್ತಿಯ ಒಟ್ಟು 14 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಲಾ 1 ಲಕ್ಷ ಪ್ರೋತ್ಸಾಹ ಧನ ವಿತರಿಸಲಾಯಿತು.

ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕ್ ನಿಂದ ಕಳೆದ ಸಾಲಿನಂತೆ ಈ ವರ್ಷವೂ ಸಹಕಾರ ಸಂಘಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ  ಈ ಹಣವನ್ನು ನೀಡಲಾಯಿತು.

14 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಂದು ಲಕ್ಷದಂತೆ ಒಟ್ಟು 14.00 ಲಕ್ಷಗಳ ಸಹಾಯಧನದ ಚೆಕ್ ವಿತರಣೆ ಕಾರ್ಯಕ್ರಮವನ್ನು ದಿನಾಂಕ 06.02.2024 ರಂದು ಮೂಡಿಗೆರೆ ಡಿಸಿಸಿ ಬ್ಯಾಂಕ್ ಸಭಾಂಗದಲ್ಲಿ ನಡೆಸಲಾಯಿತು.

ಡಿಸಿಸಿ ಬ್ಯಾಂಕ್ ನಿರ್ದೇಶಕರು ಮೂಡಿಗೆರೆ ಪಿ ಸಿ ಎ ಆರ್ ಡಿ ಬ್ಯಾಂಕ್  ಅಧ್ಯಕ್ಷರಾದ ಹಳಸೆ ಶಿವಣ್ಣ ಅವರು ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಚೆಕ್ ವಿತರಿಸಿ ಮಾತನಾಡಿ ; ಈ ಹಣವನ್ನು ಡಿಸಿಸಿ ಬ್ಯಾಂಕ್ ನಿಂದ ಸಹಕಾರ ಸಂಘಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ನೀಡಲಾಗುತ್ತಿದ್ದು, ಇದನ್ನು ಮರುಪಾವತಿ ಮಾಡುವ ಅಗತ್ಯವಿಲ್ಲ. ಈ ಹಣವನ್ನು ಸಹಕಾರ ಸಂಘಗಳು ಸದುಪಯೋಗಪಡಿಸಿಕೊಂಡು ಸಂಘದ ಸದಸ್ಯರಿಗೆ ಅನುಕೂಲವಾಗುವ ರೀತಿಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ವಿನಿಯೋಗಿಸಬೇಕೆಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಿ.ಕೆ. ದಿವಾಕರ್, ಟಿಎಪಿಸಿಎಂಎಸ್ ಅಧ್ಯಕ್ಷ ವಿ.ಕೆ.ಶಿವೇಗೌಡ, ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು. ಸಿ. ಇ. ಓ ಗಳು ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ