7Mudigere1A

 

 

ಚಿಕ್ಕಮಗಳೂರು ಮೂಡಿಗೆರೆ ನಡುವಿನ ಉದ್ದೇಶಿತ ಹೆದ್ದಾರಿ ರಸ್ತೆ ಅಗಲಿಕರಣ   ಕಾರ್ಯ ಪ್ರಾರಂಭಿಸದೇ ಇದ್ದರೆ ಫೆಬ್ರವರಿ 14ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್ ಗೌಡ ಮಾತನಾಡಿ, ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿಯಿಂದ ಮೂಡಿಗೆರೆ ಹ್ಯಾಂಡ್‍ಪೋಸ್ಟ್ ವರೆಗೆ ರಸ್ತೆ ಅಗಲೀಕರಣ ಮಾಡಲು ಹೈವೆ ಪ್ರಾಧಿಕಾರದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾ ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ರಸ್ತೆ ಅಗಲೀಕರಣವಾಗಿದೆ. ಆದರೆ ಮೂಡಿಗೆರೆ ತಾಲೂಕಿನಲ್ಲಿ ಮಾತ್ರ ಇದೂವರೆಗೂ ಸಾಧ್ಯವಾಗಿಲ್ಲ. ಹಾಗಾಗಿ ಇನ್ನು ಒಂದು ವಾರದಲ್ಲಿ ರಸ್ತೆ ಅಗಲೀಕರಣಕ್ಕೆ ಚಾಲನೆ ನೀಡಬೇಕು. ವಿಳಂಬ ನೀತಿ ಅನುಸರಿಸಿದರೆ ಎಲ್ಲಾ ಪ್ರಗತಿಪರ ಸಂಘಟನೆಯೊಂದಿಗೆ ಫೆ.14ರಂದು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಡಿ.ಆರ್.ಪುಟ್ಟಸ್ವಾಮಿಗೌಡ ಮಾತನಾಡಿ, ತಾಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳೆ ನಡೆಯುತ್ತಿಲ್ಲ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮರಿಚಿಕೆಯಾಗಿದೆ. ಅಧಿಕಾರಿಗಳಿಗೆ ಒತ್ತಡ ತಂದು ಕೆಲಸ ಮಾಡಿಸಬೇಕಾದ ಜನಪ್ರತಿನಿಧಿಗಳು ಚಕಾರ ಎತ್ತುತ್ತಿಲ್ಲ. ಹಾಗಾಗಿ ಫೆ.14ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ಎಲ್ಲಾ ಪ್ರಗತಿಪರ ಸಂಘಟನೆಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.

ರೈತ ಸಂಘದ ಕಾರ್ಯದರ್ಶಿ ಚಂದ್ರೇಗೌಡ. ಕಸಾಪ ಅಧ್ಯಕ್ಷ ಲಕ್ಷ್ಮಣ್‍ಗೌಡ, ಕರವೇ ಅಧ್ಯಕ್ಷ ವಿನೋಧ್‍ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ