halle 1

 

 

ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದ ಪ್ರವಾಸಿಗರ ಕಾರನ್ನು ಅಡ್ಡಗಟ್ಟಿ   ತಂಡವೊಂದು ಹಲ್ಲೆ ನಡೆಸಿದ ಘಟನೆ ಶೃಂಗೇರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪ ಮೂಲದ ಕುಟುಂಬವೊಂದು ಕಳೆದ ರಾತ್ರಿ ಮೂರು ಕಾರುಗಳಲ್ಲಿ ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಭೇಟಿ ನೀಡುವ ಉದ್ದೇಶದಿಂದ ಆಗಮಿಸಿದ್ದರು. ಈ ವೇಳೆ ಹರಿಹರಪುರದಲ್ಲಿ ಇವರಿದ್ದ ಕಾರು ಮತ್ತು ಬೈಕೊಂದರ ಮಧ್ಯೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಇದೇ ವಿಚಾರವಾಗಿ ಯುವಕರ ತಂಡವು ಶೃಂಗೇರಿ ಬಸ್ ನಿಲ್ದಾಣದ ಬಳಿ ಕಾರನ್ನು ಕಾರಿನಲ್ಲಿದ್ದ ಐವರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದೆ ಎಂದು ದೂರಲಾಗಿದೆ. ಹಲ್ಲೆಯಿಂದ ಗಾಯಗೊಂಡವರು ಶೃಂಗೇರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ್ದರು.

ಈ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಬೈಕ್-ಕಾರು ಅಪಘಾತ ಪ್ರಕರಣ ಹಾಗೂ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಶೃಂಗೇರಿ ತಾಲೂಕಿನವರಾದ ನಾಗೇಂದ್ರ, ರವಿಸಂಜಯ್, ಕೀರ್ತನ್, ಪ್ರಸಾದ್ ಹಾಗೂ ರಜತ್ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಓಮ್ನಿ ಕಾರು, ಹೋಂಡಾ ಆಕ್ಟಿವಾ ಸ್ಕೂಟಿ, ಎರಡು ಎರಡು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ