tiger

ಸಾಂದರ್ಭಿಕ ಚಿತ್ರ

 

 

ಮೂರು ವರ್ಷ ಪ್ರಾಯದ ಗಂಡು ಹುಲಿ  ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ  ಬೇಲೂರು ತಾಲೂಕಿನಲ್ಲಿ ನಡೆದಿದೆ.

ಬೇಲೂರು ತಾಲ್ಲೂಕಿನ ರಾಮದೇವರಹಳ್ಳದ ಬಳಿ ಈ ಘಟನೆ ನಡೆದಿದೆ.

ಹುಲಿಯನ್ನು ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ  ಸೆರೆ ಹಿಡಿಯಲಾಗಿತ್ತು. ಬಳಿಕ ರೇಡಿಯೋ ಕಾಲರ್ ಅಳವಡಿಸಿ ಚಿಕ್ಕಮಗಳೂರು  ಜಿಲ್ಲೆಯ ಭದ್ರ ಅಭಯಾರಣ್ಯಕ್ಕೆ ಬಿಡಲಾಗಿತ್ತು. ಆದರೆ ಹುಲಿ ಭದ್ರ ಅಭಯಾರಣ್ಯದಿಂದ ಬೇಲೂರು ಬಳಿ ಬಂದು ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸೋಮವಾರ  ಹಳ್ಳದ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತದೇಹ ಸ್ಥಳೀಯರಿಗೆ ಕಾಣಿಸಿದೆ. ಕೂಡಲೇ ಅರಣ್ಯ ಇಲಾಖೆಗೆ   ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ