sdpi protest

 

 

– ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿ ನಗರದ ಆಝಾದ್ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ರವರು ರಾಜ್ಯ ಸಭೆಯಲ್ಲಿ ಇಂದು ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯೂ ಕೇಂದ್ರ ಸರ್ಕಾರವು ಒಂದು ಸಮುದಾಯದ ವಿರುದ್ಧ ಪಕ್ಷಪಾತದಿಂದ ಕೂಡಿದ್ದು, ಅಸಂವಿಧಾನಿಕ ಮತ್ತು ಜನ ವಿರೋಧಿಯಾಗಿದೆ SDPI ಪಕ್ಷವು ಈ ಮಸೂದೆಯನ್ನು ಕಟುವಾಗಿ ವಿರೋಧಿಸುತ್ತದೆ, ಹಾಗೂ ಯಾವುದೇ ಕಾರಣಕ್ಕೂ ರಾಜ್ಯಸಭೆಯೂ ಈ ಮಸೂದೆಯನ್ನು ಅಂಗೀಕರಿಸಬಾರದು, ವಕ್ಫ್ ನ ಕಾನೂನುಗಳನ್ನುತಿದ್ದುಪಡಿ ಮಾಡುವ ಮೂಲಕ ವಕ್ಫ್ ಸಂಪತ್ತನ್ನು ಕಬಳಿಸುವ ಕೋಮುವಾದಿ ಸರ್ಕಾರದ ಹುನ್ನಾರವಾಗಿದೆ ಎಂದು ಹೇಳಿದರು.

ಜಿಲ್ಲಾ ಅಧ್ಯಕ್ಷರಾದ ಮುಸ್ತಫ ಆಲ್ದೂರು ರವರು ಮಾತನಾಡಿ ಜಂಟಿ ಸದನ ಸಮಿತಿಯು ರಾಜ್ಯ ಸಭೆಯಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯೂ ಸಂವಿಧಾನ ಬಾಹಿರವಾಗಿದೆ, ಈ ಮಸೂದೆಯನ್ನು ಈ ಕೂಡಲೇ ಹಿಂದಕ್ಕೆ ತೆಗೆದುಕೊಳ್ಳದಿದ್ದರೆ ದೇಶಾದ್ಯಂತ ಬೃಹತ್ ಮಟ್ಟದ ಪ್ರತಿಭಟನೆಗಳು ನಡೆಯಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನೆರೆದಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಪ್ರಗತಿಪರ ಸಂಘಟನೆಗಳ ಮುಖಂಡರಾದ ಕೃಷ್ಣಮೂರ್ತಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಂಟರಮಕ್ಕಿ, ಜಿಲ್ಲಾ ಪ್ರಧಾನ ಪ್ರಧಾನ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಝ್ಮತ್ ಪಾಷ ಹಾಗೂ ಇನ್ನಿತರರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಬಾರಕ್, ಕಾರ್ಯದರ್ಶಿ ಅಜ್ನಾನ್, ಕೋಶಾಧಿಕಾರಿ ಮೊಹಮ್ಮದ್ ಅಲಿ, ಸಮಿತಿ ಸದಸ್ಯರುಗಳಾದ ಖಾಲಿದ್ ಕೆ.ಪಿ, ಅಮ್ಜದ್ ಕಡೂರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಆರೀಫ್, ಸಮಿತಿ ಸದಸ್ಯರುಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ