jalal

 

 

ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.

ಬಾಳೆಹೊನ್ನೂರಿನ ಭದ್ರಾ ನದಿಗೆ ನಿನ್ನೆ ಸಂಜೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ಎಂಬ ಯುವಕ ನದಿಯ ಸುಳಿಗೆ ಸಿಲುಕಿದ್ದು ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದ್ದರೂ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.

ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ