aropi

 

 

ತನ್ನ ಸಂಬಂಧಿ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ತಮ್ಮನ ಅತ್ತೆಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿ ಕಾಫಿ ತೋಟದಲ್ಲಿ ನೇಣಿಗೆ ಶರಣಾದ ಘಟನೆ ಮೂಡಿಗೆರೆ  ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದ ವ್ಯಕ್ತಿಯನ್ನು ಶಶಿಧರ್ ಪೂಜಾರಿ ಎಂದು ಗುರುತಿಸಲಾಗಿದೆ. ಆತ ತನ್ನ ಸಹೋದರನ ಅತ್ತೆಯಾಗಿದ್ದ ಯಮುನಾ (65) ಎಂಬವರ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದ. ಕುಡಿದ ಮತ್ತಿನಲ್ಲಿದ್ದ ಆತನಿಗೆ ಮಹಿಳೆ ಬುದ್ದಿಮಾತು ಹೇಳಿದ್ದಕ್ಕೆ ಕೆರಳಿ ಹತ್ಯೆ ಮಾಡಿದ್ದ ಎಂದು ತಿಳಿದು ಬಂದಿದೆ.

ಮಹಿಳೆಯನ್ನು ಹತ್ಯೆಗೈದು ಪರಾರಿಯಾಗಿದ್ದ ಶಶಿಧರ್ ಗಾಗಿ ಬಣಕಲ್ ಪೊಲೀಸರ ತೀವ್ರ ಹುಟುಕಾಟ ನಡೆಸಿದ್ದರು. ಆತನ ಶವ ಭಾರತೀಬೈಲ್‍ನ ಕಾಫಿತೋಟದಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಕಣತಿ ಗ್ರಾಮದ ದರಣಪ್ಪ ಪೂಜಾರಿ ಅವರ ಪತ್ನಿ ಯಮುನಾ ಕೊಲೆಯಾಗಿದ್ದ ದುರ್ದೈವಿ.
ಆರು ತಿಂಗಳಿಂದ ಪುತ್ರಿಯ ಮನೆ ಭಾರತಿಬೈಲ್ ಗ್ರಾಮಕ್ಕೆ ಬಂದು ನೆಲೆಸಿದ್ದ ಯಮುನಾ ಅವರು ಭಾನುವಾರ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಮಗಳ ಮನೆಗೆ ಬಂದಿದ್ದರು. ಆಗ ಮನೆಯಲ್ಲಿ ಕುಡಿದು ಜಗಳವಾಡುತ್ತಿದ್ದ ಮಗಳ ಗಂಡನ ಅಣ್ಣ ಶಶಿಧರ ಪೂಜಾರಿಗೆ ಯಮುನಾ ಬುದ್ದಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ಶಶಿಧರ ಪೂಜಾರಿ ಸುತ್ತಿಗೆಯಿಂದ ಯಮುನಾ ಅವರ ತಲೆಗೆ ಹೊಡೆದಿದ್ದಾನೆ ಯಮುನಾ ಸ್ಥಳದಲ್ಲಿ ಕುಸಿತು ಬಿದ್ದು ಸಾವನ್ನಪ್ಪಿದ್ದರು.  ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ ಆರೋಪಿ ಶಶಿಧರ್ ಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ