18Mudigere2A

 

 

ಮೂಡಿಗೆರೆ  ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳಿಗೆ ಸೋಮವಾರ ಸಂಜೆ ಶಾಸಕಿ ನಯನಾ ಮೋಟಮ್ಮ ದಿಢೀರ್ ಬೇಟಿ ನೀಡಿ ಪರಿಶೀಲಿಸಿದರು.

ಆರಂಭದಲ್ಲಿ ಹಾಸ್ಟೆಲ್‍ನಲ್ಲಿರುವ ಸಿಂಟೆಕ್ಸ್, ಸೋಲಾರ್, ಅಡುಗೆ ಮನೆ, ತರಕಾರಿ ಹಾಗೂ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು.  ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಸೌಲಭ್ಯ ಸಿಗುವ ಸಲುವಾಗಿ ಸುರಕ್ಷಿತೆ ಮತ್ತು ಪೋಷಣೀಯ ವಾತಾವರಣ ಒದಗಿಸಲು ಹಾಸ್ಟೆಲ್‍ಗಳನ್ನು ನಿರ್ಮಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಮೂಲ ಸೌಕರ್ಯವನ್ನು ಸರಕಾರ ಒದಗಿಸಿದೆ.

ವಿದ್ಯಾರ್ಥಿಗಳು ಯಾವುದೇ ಬೇಧ, ಭಾವವಿಲ್ಲದೇ ಒಗ್ಗಟ್ಟಾಗಿ ಕೂಡು ಕುಟುಂಬದ ರೀತಿಯಲ್ಲಿರಬೇಕು. ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನ ಅಲಂಕರಿಸಬೇಕು. ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಗಮನಕ್ಕೆ ತರಬೇಕೆಂದು ಹೇಳಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ