ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದಡಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನ ಮಾಡಿದೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್‌ಎಸ್ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು.
ಇದೀಗ ಹಣದ ಬದಲಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಲು ಸರ್ಕಾರ ತೀರ್ಮಾನಿಸಿದೆ.



