IMG-20250219-WA0409

 

 

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದ ಸಂಜಯ್ ಹಾಗೂ ಸಂದೀಪ್ ಅವರ ಮನೆಯಲ್ಲಿ ಮಹಾನ್ ವೀರನಾಗಿ ಖ್ಯಾತಿ ಪಡೆದ ಛತ್ರಪತಿ ಶಿವಾಜಿ ಮಹಾರಾಜರ ಹುಟ್ಟುಹಬ್ಬವನ್ನು ಸರಳವಾಗಿ  ಹೃದಯಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಬಿನ್ನಡಿ ಮಾತನಾಡಿ, “ಛತ್ರಪತಿ ಶಿವಾಜಿ ಮಹಾರಾಜರು ಅಪರೂಪದ ದೇಶಭಕ್ತ. ಇಂತಹ ಮಹಾನ್ ರಾಜನ ಹುಟ್ಟುಹಬ್ಬವನ್ನು ಆಚರಿಸುವ ಅವಕಾಶ ನಮಗೆ ಸಿಕ್ಕಿದ್ದು ಹೆಮ್ಮೆಯ ವಿಚಾರ,” ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ಮುಖಂಡ ಸಂಜಯ್ ಗೌಡ ಕೊಟ್ಟಿಗೆಹಾರ ಅವರು ಮಾತನಾಡಿ, “ಶಿವಾಜಿಯ ಜೀವನ ಚರಿತ್ರೆ ನಮ್ಮೆಲ್ಲರಿಗೂ ಮಾದರಿಯಾಗಬೇಕು. ಇತಿಹಾಸದ ಪುಟಗಳನ್ನು ತಿರುವಿಹಾಕಿದರೆ, ಅವರ ಅಮೋಘ ದೇಶಪ್ರೇಮ, ಶೌರ್ಯ, ಹಾಗೂ ಆಡಳಿತ ತಂತ್ರದ ಮಹತ್ವ ತಿಳಿಯುತ್ತದೆ. ಇಂದು ಅವರ ಜನ್ಮದಿನವನ್ನು ನಮ್ಮ ಮನೆಯಲ್ಲಿ ಆಚರಿಸುವ ಸೌಭಾಗ್ಯ ಒದಗಿ ಬಂದಿದೆ ಎಂದರು
ಈ ಕಾರ್ಯಕ್ರಮದಲ್ಲಿ ಸಂದೀಪ್, ಪ್ರಕಾಶ್, ಸುಂದರೇಶ್ ಗೌಡ, ಯಶೋದಮ್ಮ, ಅನುಷಾ.ನರೇಂದ್ರ ಗೌಡ, ಚಂದನ, ಲೀಲಾ. ನಾರಾಯಣ.ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ