ಮೂಡಿಗೆರೆ ಪಟ್ಟಣ ಪಂಚಾಯಿತಿ ಪ್ರಭಾರಿ ಅಧ್ಯಕ್ಷರಾಗಿ ಹೊಸಕೆರೆ ರಮೇಶ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ಗೀತಾ ಅಜಿತ್ ಕುಮಾರ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಭಾರಿ ಅಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷರಾಗಿರುವ ಹೊಸಕೆರೆ ರಮೇಶ್ ಅವರು ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಕಾಂಗ್ರೇಸ್ ಪಕ್ಷದಲ್ಲಿ ಆಗಿದ್ದ ಒಪ್ಪಂದದಂತೆ ಗೀತಾ ಅಜಿತ್ ಅವರು ರಾಜೀನಾಮೆ ನೀಡಿದ್ದು, ಮುಂದಿನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುವವರೆಗೆ ಉಪಾಧ್ಯಕ್ಷ ಹೊಸಕೆರೆ ರಮೇಶ್ ಅವರು ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಸಂಸದರು ಶಾಸಕರು, ವಿಧಾನ ಪರಿಷತ್ ಸದಸ್ಯರ ಮತಗಳೆಲ್ಲಾ ಸೇರಿ ಸದ್ಯಕ್ಕೆ ಕಾಂಗ್ರೇಸ್ ಮತ್ತು ಬಿಜೆಪಿ ಸತಲಾ 7 ಮತಗಳ ಬಲವನ್ನು ಹೊಂದಿದ್ದು, ಅಧಿಕಾರ ಪಡೆಯಲು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸಿದ್ದಾರೆ.
ಈ ನಡುವೆ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೇಸ್ ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ. ವೆಂಕಟೇಶ್ ಮತ್ತು ಬಿಜೆಪಿ ಸದಸ್ಯೆ ಕಮಲಮ್ಮ ಅವರ ನಡುವೆ ನಡೆದಿದೆ ಎನ್ನಲಾದ ಆಡಿಯೋ ಸಂಭಾಷಣೆಯೊಂದು ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.




