modi 1

 

 

ಅಧಿಕ ತೂಕ ಅಥವಾ ಬೊಜ್ಜು ಸಮಸ್ಯೆ ನಿವಾರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉತ್ತಮ ಆರೋಗ್ಯ ಸಲಹೆ ನೀಡಿದ್ದಾರೆ. ಆಹಾರದಲ್ಲಿ ಕಡಿಮೆ ಪ್ರಮಾಣದ ಎಣ್ಣೆ ಬಳಸುವಂತೆ ಅವರು ಜನರಿಗೆ ಸಲಹೆ ನೀಡಿದ್ದಾರೆ. ಅಡುಗೆ ಎಣ್ಣೆ ಬಳಕೆಯನ್ನು ಶೇ.10 ರಷ್ಟು ಕಡಿತಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.

ತಮ್ಮ ಮಾಸಿಕ ಆಕಾಶವಾಣಿಯ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ಆಹಾರದಲ್ಲಿ ಕಡಿಮೆ ಎಣ್ಣೆ ಬಳಸುವುದು ಮತ್ತು ಸ್ಥೂಲಕಾಯತೆ ನಿಭಾಯಿಸುವುದು ಕೇವಲ ವೈಯಕ್ತಿಕ ಆಯ್ಕೆಯಾಗಿರದೆ ಕುಟುಂಬದ ದೃಷ್ಟಿಯಿಂದ ಇದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜನರು ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳುವಂತೆ ಇರುವ ಡಬಲ್ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಅವರ ಸಂದೇಶಗಳನ್ನು ಮೋದಿ ನುಡಿದರು.

ಡೆಹ್ರಾಡೂನ್‌ನಲ್ಲಿ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನೆಯ ಸಂದರ್ಭದಲ್ಲಿ ಬಹಳ ಮುಖ್ಯವಾದ ವಿಷಯ ಪ್ರಸ್ತಾಪಿಸಿದ್ದೆ. ಅದು ದೇಶದಲ್ಲಿ ಹೊಸ ಚರ್ಚೆಯನ್ನು ಪ್ರಾರಂಭಿಸಿದೆ. ಅದು ಬೊಜ್ಜಿನ ವಿಚಾರವಾಗಿದೆ. ಪಿಟ್ ಮತ್ತು ಆರೋಗ್ಯ ರಾಷ್ಟ್ರವಾಗಲು ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾಗಿದೆ ಎಂದು ಮೋದಿ ಹೇಳಿದರು.

2022ರ ವಿಶ್ವ ಆರೋಗ್ಯ ಸಂಸ್ಥೆ ದತ್ತಾಂಶದ ಪ್ರಕಾರ ವಿಶ್ವದಾದ್ಯಂತ ಸುಮಾರು 250 ಕೋಟಿ ಜನರು ಅಧಿಕ ತೂಕವನ್ನು ಹೊಂದಿರುವುದನ್ನು ತೋರಿಸುತ್ತದೆ. ಅಂದರೆ ಅವರು ಅಗತ್ಯಕ್ಕಿಂತ ಹೆಚ್ಚು ತೂಕವನ್ನು ಹೊಂದಿದ್ದಾರೆ. ಈ ಅಂಕಿಅಂಶಗಳು ತುಂಬಾ ಗಂಭೀರವಾಗಿದ್ದು, ಇದು ಏಕೆ ಉಂಟಾಗುತ್ತಿದೆ ಎಂಬುದರತ್ತ ಯೋಚಿಸುವಂತೆ ಮಾಡಿದೆ. ಅಧಿಕ ತೂಕ ಅಥವಾ ಬೊಜ್ಜು ಅನೇಕ ರೀತಿಯ ಸಮಸ್ಯೆಗಳು ಮತ್ತು ರೋಗಗಳಿಗೆ ಕಾರಣವಾಗುತ್ತದೆ. ಸಣ್ಣ ಪ್ರಯತ್ನಗಳಿಂದ ಈ ಸವಾಲನ್ನು ನಿಭಾಯಿಸಬಹುದು ಎಂದು ಮೋದಿ ಹೇಳಿದರು.

ಭಾರತ ಆರೋಗ್ಯವಂತ ದೇಶವಾಗಲು ಬೊಜ್ಜಿನ ವಿರುದ್ಧ ಆಂದೋಲನ ಮುಖ್ಯ ಎಂದು ಮನ್‌ ಕೀ ಬಾತ್‌ನಲ್ಲಿ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸೇರಿ 10 ಮಂದಿಯನ್ನು ಆಂದೋಲನಕ್ಕೆ ರಾಯಭಾರಿಯನ್ನಾಗಿ ಮಾಡಿದ್ದಾರೆ.

 

ಅಲ್ಲದೆ, ‘ನಮ್ಮ ಚಳುವಳಿ ದೊಡ್ಡದಾಗಲು ಪ್ರತಿ ನಾಮಾಂಕಿತರೂ ತಲಾ 10 ಜನರನ್ನು ನಾಮನಿರ್ದೇಶನ ಮಾಡುವಂತೆ ನಾನು ವಿನಂತಿಸುತ್ತೇನೆ’ ಎಂದು ಕೋರಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ