ದಕ್ಷಿಣ ಕಾಶಿ ಕಳಸೇಶ್ವರ ದೇವಸ್ಥಾನಕ್ಕೆ ಇತ್ತೀಚೆಗೆ 19 ವಿದೇಶಿ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ರಷ್ಯಾದಿಂದ ಬಂದ ಪ್ರವಾಸಿಗರು ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಧ್ಯಾನ ಮಾಡಿ, ಜಪ ಮಾಡಿದ್ದಾರೆ. ನಂತರ ದೇವಾಲಯದಲ್ಲಿ ಎಲ್ಲರಂತೆ ನೆಲದ ಮೇಲೆ ಕುಳಿತು ಪ್ರಸಾದ ಸ್ವೀಕರಿಸಿದ್ದಾರೆ. ವಿದೇಶಿಗರ ಭಕ್ತಿಯನ್ನು ಕಂಡು ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಕಳಸೇಶ್ವರ ದೇವಸ್ಥಾನ ಕರ್ನಾಟಕದಲ್ಲಿನ ಜನಪ್ರಿಯ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಬಹಳಷ್ಟು ವಿದೇಶಿ ಪ್ರವಾಸಿಗರು ಇಲ್ಲಿಗೆ ಆಗಾಗ ಭೇಟಿ ನೀಡುತ್ತಾರೆ.
ಆದರೆ ಇತ್ತೀಚೆಗೆ ಭೇಟಿ ನೀಡಿದ್ದ ರಷ್ಯಾದೇಶದ ಪ್ರವಾಸಿಗರು ಕೇವಲ ದೇವಸ್ಥಾನಕ್ಕೆ ಭೇಟಿ ನೀಡಿರುವುದು ಮಾತ್ರವಲ್ಲ ಇಲ್ಲಿ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಿ ಜೊತೆಗೆ ಧ್ಯಾನವನ್ನು ಮಾಡಿ ಗಮನ ಸೆಳೆದಿದ್ದಾರೆ. ಭಾರತೀಯ ಸಂಸ್ಕೃತಿ ಹೇಗೆ ವಿದೇಶಿಗರ ಗಮನ ಸೆಳೆಯುತ್ತಿದೆ ಎಂಬುದಕ್ಕೆ ಇದು ನಿದರ್ಶನವಾಗಿದೆ.



