Screenshot_20250224_190718

 

 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಬಾಳೂರು ಹೋಬಳಿ ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ  ಸುಟ್ಟು ಕರಕಲಾಗಿದೆಯಾಗಿದೆ. ಈ ದುರ್ಘಟನೆಯಲ್ಲಿ ಮನೆಯಲ್ಲಿ ಇದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ.

ಅಗ್ನಿ ಅವಘಡದಲ್ಲಿ ಮನೆಯಲ್ಲಿ ಇದ್ದ  ಗೃಹಿಣಿ ರೇಖಾ (36) ತೀವ್ರವಾಗಿ ಗಾಯಗೊಂಡು, ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಡಿಗೆಗೆ ಸ್ಟವ್ ಹಚ್ಚುವಾಗ ಅವಘಡ ಎಂಬ ಶಂಕೆ
ಅಡಿಗೆಗೆ ಸ್ಟವ್ ಹಚ್ಚುವ ವೇಳೆ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದರಾದರೂ ಅಷ್ಟೊತ್ತಿಗೆ ಮನೆಯ ಪರಿಕರಗಳು ಬಹುತೇಕ ಬೆಂಕಿಗೆ ಆಹುತಿಯಾಗಿದೆ.

ಮಾಳಿಗನಾಡು ಗ್ರಾಮದ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ