8Mudigere1A

 

 

ಮಕ್ಕಳಲ್ಲಿ ಸಂಸ್ಕಾರದ ಕೊರತೆ ಹೆಚ್ಚಾಗಿದೆ. ಮೊಬೈಲ್, ಟಿವಿಗಳಿಂದ ನಮ್ಮ ಅರಿವಿಲ್ಲದೇ ಆಕ್ರೋಶ ತುಂಬಿಕೊಳ್ಳುವ ಪರಿಣಾಮ ಅಶಾಂತಿಗೆ ಕಾರಣವಾಗುತ್ತಿದೆ. ಬಹು ಸಂಸ್ಕøತಿ, ಮಮತೆ ಹಾಗೂ ದ್ವೇಷ ರಹಿತ ಸಮಾಜ ನಿರ್ಮಾಣಗೊಳ್ಳಲು ಮಹಿಳೆಯರಿಂದ ಮಾತ್ರ ಸಾಧ್ಯವಿದೆ. ಅದಕ್ಕಾಗಿ ಮಹಿಳೆಯರಲ್ಲಿ ಯುದ್ಧ ವಿರೊಧಿ ಮನಸ್ಥಿತಿ ನಿರ್ಮಾಣವಾಗಬೇಕು ಎಂದು ವಕೀಲ ಹಾಗೂ ಚಿಂತಕ, ಮಲೆನಾಡು ಕರಾವಳಿ ಹಿತರಕ್ಷಣಾ ವೇದಿಕೆ ಮುಖಂಡ ಸುಧೀರ್ ಕುಮಾರ್ ಮುರೋಳ್ಳಿ ಹೇಳಿದರು.

ಅವರು ಶನಿವಾರ ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ವಿವಿಧ ಮಹಿಳಾ ಸಂಘಟನೆ ಹಾಗು ಇಲಾಖೆ ವತಿಯಿಂದ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮಹಿಳೆಯರ ಸಬಲೀಕರಣಕ್ಕೆ ಎಷ್ಟೋ ಮಂದಿ ಹೋರಾಟ ಮಾಡಿದ್ದಾರೆ. ಅದರಂತೆ ಮೋಟಮ್ಮ ಕೂಡ ಸಚಿವರಾಗಿದ್ದಾಗ ಸ್ತ್ರೀಶಕ್ತಿ ಯೋಜನೆಯಂತಹ ಕ್ರಾಂತಿಕಾರಿ ಕಾರ್ಯಕ್ರಮ ತಂದ ಮೇಲೆ ಮಹಿಳೆಯರ ಸಬಲೀಕರಣಗೊಳ್ಳಲು ಇನ್ನಷ್ಟು ಅಧಿಕಗೊಳ್ಳಲು ಕಾರಣವಾಗಿಯಿತು. ಇದಕ್ಕೆ ಹಾಗೂ ನಮ್ಮೆಲ್ಲರ ಬದುಕಿಗೆ ಶಕ್ತಿ ತುಂಬಿದ್ದು ಸಂವಿಧಾನದಲ್ಲಿ ಎಂಬುದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಮಾತನಾಡಿ : ಓರ್ವ ಮಹಿಳೆ ಮೇಲೆ ಎಲ್ಲೇ ದೌರ್ಜನ್ಯವಾದರೂ ಎಲ್ಲಾ ಮಹಿಳೆಯರು ಸುಮ್ಮನೆ ಕೂರಬಾರದು. ಅದರ ವಿರುದ್ಧ ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕೆಂದು. ಗಂಡು ಹೆಣ್ಣು ಇಬ್ಬರೂ ಸಮಾನರು. ಇಬ್ಬರಲ್ಲೂ ಉತ್ತಮ ಬಾಂಧವ್ಯ ಮೂಡುವ ವಾತಾವರಣ ಸೃಷ್ಟಿಸಲು ಪೋಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಆಗ ಗಂಡು ಹೆಣ್ಣಿನ ಉತ್ತಮ ಬಾಂಧವ್ಯ ಮೂಡುವುದರಿಂದ ದೌರ್ಜನ್ಯ ನಿಯಂತ್ರಣಗೊಳ್ಳುತ್ತದೆ.

ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಗುರುತಿಸಿಕೊಳ್ಳುತ್ತಿರುವುದು ಹೆಮ್ಮಯ ಸಂಗತಿ. ಆದರೆ ರಾಜಕೀಯ ಕ್ಷೇತ್ರದಲ್ಲಿ ಬಹಳ ಹಿಂದುಳಿದಿದ್ದಾರೆ. ರಾಜ್ಯದಲ್ಲಿ ಶೇ.50 ರಷ್ಟು ಮಹಿಳಾ ಮತದಾರರಿದ್ದರೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ 25 ಮಹಿಳೆಯರು ಸ್ಪರ್ಧಿಸಿದ್ದು, ಕೇವಲ 6 ಮಹಿಳೆಯರು ಶಾಸಕರಾಗಿದ್ದಾರೆ. ಇನ್ನು ಮುಂದೆ ಯಾವುದೇ ಚುಣಾವಣೆಗಳು ಬಂದರೂ ಮಹಿಳೆಯರುನ್ನು ಗೆಲ್ಲಿಸಲು ಮುಂದಾಗಬೇಕೆಂದು ಕರೆ ನೀಡಿದರು.

ಎಸ್‍ಪಿ ವಿಕ್ರಮ್ ಅಮ್ಟೆ ಮಾತನಾಡಿ, ಹಿಂದೆಗಿಂತ ಹಾಗೂ ಈಗಿನ ಸ್ಥಿತಿಗತಿ ಅವಲೋಕಿಸಿದರೆ ಮಹಿಳೆಯರ ಸುಧಾರಣೆ ಸಾಕಷ್ಟು ಬದಲಾವಣೆಯಾಗಿದೆ. ಮಹಿಳೆ ಹೊರತುಪಡಿಸಿ ಸಮಾಜ ನೋಡಲು ಸಾಧ್ಯವೇ ಇಲ್ಲ. ಪೊಲೀಸ್ ಇಲಾಖೆ ಮಾತ್ರವಲ್ಲ. ಎಲ್ಲಾ ರಂಗದಲ್ಲಿ ಮಹಿಳೆಯರು ಗುರುತಿಸಿಕೊಳ್ಳುತ್ತಿದ್ದಾರೆ. ಇದನ್ನು ಗಮನಿಸಿದರೆ ಮಹಿಳೆಯರ ಸಬಲೀಕರಣ ಆಗುತ್ತಿದ್ದು, ಇನ್ನು ಅಧಿಕಗೊಳ್ಳಬೇಕಾಗಿದೆ ಎಂದು ಹೇಳಿದರು.

ರಾಜ್ಯ ರೈತ ಹೋರಾಟ ಸಮಿತಿ ಅಧ್ಯಕ್ಷೆ ಅನುಸೂಯ, ಇನ್ಫೋಸಿಸ್ ಕಂಪನಿ ಅಸಿಸ್ಟೆಂಟ್ ಮ್ಯಾನೇಜರ್ ಮಂಜುಳ ಸಂತೋಷ್, ಕೈಗಾರಿಕೋದ್ಯಮಿ ಎಚ್.ಸರೋಜಾ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸಂಚಿ ಹೊನ್ನಮ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಟಿ.ಕಮಲಾಕ್ಷಮ್ಮ ವಹಿಸಿದ್ದರು. ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಪ.ಪಂ. ಅಧ್ಯಕ್ಷ ಕೆ.ವೆಂಕಟೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್.ಜಯರಾಂ, ಬೆಳಗಾರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಕಾರ್ಯದರ್ಶಿ ಮನೋಹರ್, ತಾ.ಪಂ. ಇಒ ದಯಾವತಿ, ಸಿಡಿಪಿಒ ಮಹೇಶ್ ಮತ್ತಿತರರಿದ್ದರು.

ಶಿಕ್ಷಕಿ ಶ್ರೀಮತಿ ನಿರಂಜನ ಹಾಲೂರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ