veerasaiva

 

 

ಚಿಕ್ಕಮಗಳೂರು ನಗರದ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ  ಶನಿವಾರ ವೀರಶೈವ ಲಿಂಗಾಯತ ಮಹಾ ಸಂಗಮ ಕಾರ್ಯಕ್ರಮ ನಡೆಯಿತು.

ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರವಾಗಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಸಂಘಟನಾ ಚತುರ, ಭವಿಷ್ಯದ ನಾಯಕ, ಮುಖ್ಯಮಂತ್ರಿ ಎಂದು ವೀರಶೈವ ಲಿಂಗಾಯತ ಮಹಾ ಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಟರಿಗೆ ಬಹಿರಂಗ ಸಂದೇಶ ರವಾನಿಸಿದರು.

ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ. ಪಕ್ಷ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರರನ್ನು ಆ ಸ್ಥಾನದಲ್ಲಿ ಮುಂದುವರಿಸಬೇಕು. ಈ ಮಾತನ್ನು ಇಲ್ಲಿ ಮಾತ್ರವಲ್ಲ ವಿಜಾಪುರದಲ್ಲೂ ಹೇಳಲು ಸಿದ್ಧರಿದ್ದೇವೆ ಎಂದ ಮುಖಂಡರು, ನಾವುಗಳು ಯಡಿಯೂರಪ್ಪ ಹಾಗೂ ವಿಜಯೇಂದ್ರ ಪರವಾಗಿದ್ದೇವೆ ಎಂದು ಸಮಾವೇಶದ ಆರಂಭದಿಂದ ಕೊನೆಯವರೆಗೆ ಹೇಳಿದರು.

ವೀರಶೈವ ಮುಖಂಡ ಮಾಡಳ್‌ ಮಲ್ಲಿಕಾರ್ಜುನ ಮಾತನಾಡಿ, ಇದು, ರಾಜಕೀಯ ಸಭೆ ಅಲ್ಲ. ವೀರಶೈವ ಲಿಂಗಾಯತ ಸಮಾಜದವರನ್ನು ರಾಜಕೀಯವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಾವು ಎಚ್ಚರವಾಗಿರಬೇಕು. ಸಿದ್ಧಾಂತದ ಹೆಸರಿನಲ್ಲಿ ಮೂಲೆ ಗುಂಪು ಮಾಡುತ್ತಿದ್ದಾರೆ. ನಮ್ಮೊಳಗೆ ಒಳ ಜಗಳ ಹಚ್ಚುವ ಕೆಲಸ ನಡೆಯುತ್ತಿದೆ ಎಂದರು. ನಮ್ಮ ಸಮಾಜದ ಮುಖಂಡರಿಗೆ ಅನ್ಯಾಯವಾದಾಗ, ಕೀಳಾಗಿ ನಡೆಸಿಕೊಂಡಾಗ ನಾವುಗಳು ಒಂದಾಗಬೇಕು. ಸಮಾಜ ಒಗ್ಗೂಡಿಸುವ ಹಾಗೂ ವಿಜಯೇಂದ್ರ ಅವರಿಗೆ ಬೆಂಬಲ ಸೂಚಿಸಲು ನಾವುಗಳು ಒಂದಾಗಬೇಕು ಎಂದು ಹೇಳಿದರು.

ಮಾಜಿ ಶಾಸಕ ಎಸ್‌.ಎಂ. ನಾಗರಾಜ್ ಮಾತನಾಡಿ,  ರಾಜ್ಯದಲ್ಲಿ ವೀರಶೈವ ಲಿಂಗಾಯತ ಶೇ. 80 ರಷ್ಟು ಜನ ಯಡಿಯೂರಪ್ಪ ಹಾಗೂ ವಿಜಯೇಂದ್ರ ಪರವಾಗಿದ್ದಾರೆ. ಇದು, ಪಕ್ಷದ ವರಿಷ್ಟರಿಗೂ ಗೊತ್ತಿದೆ. ಆದರೂ ಕಾಲೆಳೆಯುವ ಕೆಲಸ ನಡೆಯುತ್ತಿದೆ. ವಿರೋಧಿಗಳಿಗೆ ಯಡಿಯೂರಪ್ಪ ಮತ್ತು ಅವರ ಕುಟುಂಬದ ಶಕ್ತಿ ತೋರಿಸಲು ಈ ಮಹಾ ಸಂಗಮ ಸಮಾವೇಶ ನಡೆಸಲಾಗುತ್ತಿದೆ ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಶಿವಶಂಕರ್‌ ಮಾತನಾಡಿ, ಯತ್ನಾಳ್‌ ಅವರಿಗೆ ರಾಷ್ಟ್ರ ನಾಯಕರು ಬೆಂಬಲ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಇಲ್ಲದೆ ಹೋದರೆ ಅವರು ಬಗ್ಗುವುದಿಲ್ಲ. ಚಿಕ್ಕಮಗಳೂರಿನಿಂದ ದೆಹಲಿ ವರೆಗೆ ಯಡಿಯೂರಪ್ಪರವರ ವಿರೋಧಿಗಳು ಇದ್ದಾರೆ ಎಂದು ಹೇಳಿದರು.

ಯಳನಾಡು ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಮ್ಮ ಸಮಾಜದ ಯಾವುದೇ ರಾಜಕಾರಣಿ 5 ವರ್ಷ ಮುಖ್ಯಮಂತ್ರಿ ಆಗಿಲ್ಲ. ಪಕ್ಷ ಕಟ್ಟಲು ಯಡಿಯೂರಪ್ಪ ತುಂಬಾ ಶ್ರಮ ಪಟ್ಟಿದ್ದಾರೆ. ಅವರ ಬಗ್ಗೆ ಮಾತನಾಡುವ ಆ ಮನುಷ್ಯ (ಯತ್ನಾಳ್‌)ಗೆ ಬುದ್ಧಿ ಇಲ್ವಾ ಎಂದು ಹೇಳಿದರು.

ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೇರುಗಂಡಿ ಮಠದ ಶ್ರೀ ರೇಣುಕಾ ಮಹಾಂತ ಸ್ವಾಮೀಜಿ, ಹುಲಿಕೆರೆ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ಕೆ. ಬಿದರೆ ಮಠದ ಶ್ರೀ ಪ್ರಭುಕುಮಾರ ಶಿವಾ ಚಾರ್ಯ ಸ್ವಾಮೀಜಿ, ಹುಣಸಘಟ್ಟ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನಂದಿಪುರ ಮಠದ ಶ್ರೀ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ಅಣ್ಣೆಮಠದ ಶ್ರೀ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ, ಬೀರೂರು ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು.

ಮಾಜಿ ಸಚಿವ ಬಿ.ಸಿ. ಪಾಟೀಲ್‌,  ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್‌.ಎಂ. ಲೋಕೇಶ್‌ ಅಧ್ಯಕ್ಷತೆ ವಹಿಸಿದ್ದರು. ವೀರಶೈವ ಲಿಂಗಾಯುತ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ