niguda 3

 

 

ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದ ಮಂಗಳೂರಿನ ವಿದ್ಯಾರ್ಥಿ ಮಾರ್ಚ್ 7 ರಂದು ಉಡುಪಿಯಲ್ಲಿ ಪತ್ತೆಯಾಗಿದ್ದು, ರಾಜ್ಯದಾದ್ಯಂತ ಸುದ್ದಿ ಮಾಡಿದ್ದ ವಿದ್ಯಾರ್ಥಿ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. 12 ದಿನಗಳ ನಂತರ ಪತ್ತೆಯಾದ ವಿದ್ಯಾರ್ಥಿಯ ಟ್ರಾವೆಲಿಂಗ್ ಹಿಸ್ಟರಿ ಕೇಳಿ ಸ್ವತಃ ಪೊಲೀಸರೆ ಬೆಚ್ಚಿಬಿದ್ದಿದ್ದಾರೆ.

ವಿದ್ಯಾರ್ಥಿ ನಾಪತ್ತೆ ಪ್ರಕರಣದ ಕುರಿತು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಆರಂಭದಲ್ಲಿ ನನ್ನನ್ನು ಅಪಹರಣ ಮಾಡಲಾಗಿತ್ತು ಎಂದು ಪಿಯು ವಿದ್ಯಾರ್ಥಿ ದಿಗಂತ್ ಹೇಳಿಕೆ ನೀಡಿದ್ದ. ಆದರೆ, ತದನಂತರ ಮಾರ್ಚ್ 3 ರಂದು ಪ್ರಾರಂಭವಾದ ಪರೀಕ್ಷೆಗೆ ಸಿದ್ಧವಾಗಿಲ್ಲದ ಕಾರಣ ಮನೆಬಿಟ್ಟು ಹೋಗಿರುವುದನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದರು.

ಮಂಗಳೂರು ಸಮೀಪದ ಫರಂಗಿಪೇಟೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ರೂ.500 ಇಟ್ಟುಕೊಂಡು ಮನೆ ಬಿಟ್ಟಿದ್ದು, ಮಂಗಳೂರಿಗೆ ತೆರಳುವ ಮುನ್ನಾ ಅರ್ಕುಳಕ್ಕೆ ರೈಲ್ವೆ ಹಳಿಗಳ ಮೇಲೆ ನಡೆದು ಹೋಗಿದ್ದಾನೆ. ನಂತರ ಬಸ್ಸಿನಲ್ಲಿ ಶಿವಮೊಗ್ಗ, ಮೈಸೂರಿಗೆ ತೆರಳಿದ್ದ. ಅಲ್ಲಿಂದ ಬೆಂಗಳೂರು ರೈಲು ಹತ್ತಿ ಕೆಂಗೇರಿಯಲ್ಲಿ ಇಳಿದಿದ್ದು, ಬಳಿಕ ನಂದಿ ಹಿಲ್ಸ್‌ಗೆ ಹೋಗಿ ಅಲ್ಲಿ ಎರಡು ದಿನ ರೆಸಾರ್ಟ್‌ನಲ್ಲಿ ಕೆಲಸ ಮಾಡಿದ್ದ. ಅಲ್ಲಿ ಸ್ವಲ್ಪ ಹಣ ಸಂಪಾದಿಸಿ ಮೈಸೂರಿಗೆ ಹಿಂತಿರುಗಿದ್ದು, ರೈಲಿನಲ್ಲಿ ಉಡುಪಿಗೆ ಬಂದಿಳಿದಿದ್ದ ಎಂದು ಮಾಹಿತಿ ನೀಡಿದರು.

ಉಡುಪಿಯಲ್ಲಿ ಮಾರ್ಟ್ ಒಂದರಲ್ಲಿ ದಿಗಂತ್ ಆಹಾರ ಮತ್ತು ಬಟ್ಟೆ ಖರೀದಿಸಲು ಪ್ರಯತ್ನಿಸಿದ್ದಾಗ ಆತನ ಬಳಿ ಹಣ ಇರಲಿಲ್ಲ. ಈತನ ಪರಿಸ್ಥಿತಿಯನ್ನು ಗಮನಿಸಿದ ಅಂಗಡಿಯವರು ಪ್ರಶ್ನಿಸಿದಾಗ ಸಂಶಯಾಸ್ಪದವಾಗಿ ವರ್ತಿಸಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ದಕ್ಷಿಣ ಕನ್ನಡ ಪೊಲೀಸರಿಗೆ ವರ್ಗಾಯಿಸಿದ್ದಾಗಿ ತಿಳಿಸಿದರು.

ದಿಗಂತ್ ನನ್ನು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಮುಂದೆ ಹಾಜರುಪಡಿಸಿ,ಬೊಂದೇಲ್‌ನಲ್ಲಿರುವ ಮಕ್ಕಳ ರಕ್ಷಣಾ ಗೃಹದಲ್ಲಿ ಇರಿಸಲಾಗಿತ್ತು. ದಿಗಂತ್ ಎಲ್ಲಿದ್ದಾರೆ ಎಂಬ ಮಾಹಿತಿ ಕೋರಿ ದಿಗಂತ್ ಪೋಷಕರು ಕರ್ನಾಟಕ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಆತನನ್ನು ಹೈಕೋರ್ಟ್‌ಗೆ ಹಾಜರುಪಡಿಸಿ, ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಯತೀಶ್ ಹೇಳಿದರು.

ದಿಗಂತ್ ನಾಪತ್ತೆಯಾದ ನಂತರ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಫರಂಗಿಪೇಟೆಯಲ್ಲಿ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದರು. ಮಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಗಳು ಸಹ ಪ್ರತಿಭಟನೆ ಹಮ್ಮಿಕೊಂಡಿದ್ದವು. ಪ್ರಕರಣ ಹೊಸ ಹೊಸ ಆಯಾಮ ಪಡೆದುಕೊಳ್ಳತೊಡಗಿತ್ತು. ವಿದ್ಯಾರ್ಥಿಯನ್ನು ಯಾರೋ ಅಪಹರಣ ಮಾಡಿದ್ದಾರೆ ಎಂದು ಶಂಕಿಸಲಾಗಿತ್ತು. ಪ್ರಕರಣದ ಬಗ್ಗೆ ರಾಜ್ಯ ವಿಧಾನಸಭೆಯಲ್ಲೂ ವಿಷಯ ಪ್ರಸ್ತಾಪವಾಗಿತ್ತು.

ತನ್ನ ಮಗನನ್ನು ಹುಡುಕಿಕೊಡಿ ಎಂದು ದಿಗಂತ್ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಪ್ರಕರಣದ ಬಗ್ಗೆ ವರದಿ ನೀಡುವಂತೆ ಮತ್ತು ತನಿಖೆ ಚುರುಕುಗೊಳಿಸುವಂತೆ ಪೊಲೀಸ್ ಇಲಾಖೆಗೆ ತಾಕೀತು ಮಾಡಿತ್ತು. ದಿಗಂತ್ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿತ್ತು. ಡ್ರೋಣ್ ಬಳಸಿಯೂ ಪತ್ತೆಗೆ ಯತ್ನಿಸಲಾಗಿತ್ತು. ಕೂಬಿಂಗ್ ಕಾರ್ಯಾಚರಣೆ ಸಹ ಕೈಗೊಳ್ಳಲಾಗಿತ್ತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ