nalluru 2 copy

 

 

ಕಳೆದ ರಾತ್ರಿ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ನಗರದ ನಲ್ಲೂರು ರಸ್ತೆಯಲ್ಲಿ ಒಂಟಿ ಸಲಗ ರಾತ್ರಿ ರೌಂಡ್ಸ್ ಹಾಕಿದ್ದು,  ಇದು ನಗರ ಜನರಲ್ಲಿ ಆತಂಕ ಮೂಡಿಸಿದೆ.

ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ಕಾರು ಬೈಕ್ ಗಳನ್ನು ಜಖಂಗೊಳಿಸಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ.

ಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಅದನ್ನು ಸುರಕ್ಷಿತವಾಗಿ ಮರಳಿಸಲು ತಕ್ಕ ಮುನ್ನೆಚ್ಚರಿಕೆ ವಹಿಸಲಾಗಿದೆ.

ಹಠಾತ್ ಆನೆಯ ದರ್ಶನವಾದ ಹಿನ್ನೆಲೆಯಲ್ಲಿ ನಲ್ಲೂರಿನ ನಿವಾಸಿಗಳು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ