ಮೂಡಿಗೆರೆ ಪಟ್ಟಣದ ಶ್ರೀ ಹಿರೇ ದೇವಿರಮ್ಮನ ಬನದ ಶ್ರೀ ಅಯ್ಯಪ್ಪ ಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ
ಗುರುವಾರ 14ನೇ ವರ್ಷದ ವಾರ್ಷಿಕ ಪೂಜೆ ನಡೆಯಿತು.
ಬುಧವಾರ ಸಂಜೆ ವಾಸ್ತು ಹೋಮ, ಪ್ರಕಾರ ಬಲಿ , ಸ್ಥಳ ಶುದ್ದಿ ಪೂಜೆ ನಡೆದಿದ್ದು, ಗುರುವಾರ ಬೆಳಗ್ಗೆ 7 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿ ಅವರಿಗೆ ಪಂಚಾಮೃತ ಅಭಿಷೇಕ, ಅಮ್ಮನವರಿಗೆ ಪ್ರಧಾ ಕಳಸಾಭಿಷೇಕ ನೆರವೇರಿಸಿದ ಬಳಿಕ ಗಣಪತಿ ಹೋಮ, ದುರ್ಗಾ ಹೋಮ, ಪೂರ್ಣಹುತಿ ನೆರವೇರಿತು.
ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.
ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅರ್ಚಕ ವೃಂದದವರು ಪೂಜಾ ಕಾರ್ಯವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಿಕೊಟ್ಟರು.



