ಕರ್ನಾಟಕ ಸರ್ಕಾರದ ಸಚಿವ ಸಂಪುಟವು ಗ್ರಾಮೀಣ ಪ್ರದೇಶಗಳಲ್ಲಿ ಇ-ಖಾತಾ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕದ ಅಂಗೀಕಾರದೊಂದಿಗೆ, ಗ್ರಾಮೀಣ ಭಾಗದಲ್ಲಿ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಗ್ರಾಮಠಾಣಾ ವ್ಯಾಪ್ತಿಯ ಮನೆ, ನಿವೇಶನಗಳ ಸಕ್ರಮೀಕರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಇ-ಖಾತಾ ನಿರೀಕ್ಷೆಯಲ್ಲಿ ಇದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮಾಂತರ ಪ್ರದೇಶದಲ್ಲಿ ಇ-ಖಾತೆ ನೀಡಲು ಸಂಪುಟ ಒಪ್ಪಿಗೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ವಿಧೇಯಕ ಅಂಗೀಕರಿಸಿದರೆ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮಠಾಣಾ ವ್ಯಾಪ್ತಿಯಲ್ಲಿ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ನೀಡಿದಂತಾಗುತ್ತದೆ.
ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ-ನೋಂದಣಿದಾರರಿಗೆ ಆಸ್ತಿ ನೋಂದಣಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸುವಂತೆ ಆದೇಶಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಇದರಿಂದಾಗಿ ಇ ಖಾತಾ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರಿಗೆ ಇನ್ನಾದರೂ ನೆಮ್ಮದಿ ದೊರೆಯಬಹುದಾ ಕಾದು ನೋಡಬೇಕು.



