ಚಿಕ್ಕಮಗಳೂರು ನಗರದ ತೇಗೂರಿನ ಶ್ರೀ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಕೊನೆಗೂ ಪತ್ತೆಯಾಗಿದ್ದಾರೆ
ವಸತಿ ಶಾಲೆಯಿಂದ ನಾಪತ್ತೆಯಾಗಿ 12 ದಿನಗಳ ನಂತರ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ
ಮಾರ್ಚ್ ಮೂರರಂದು ರಾತ್ರಿ ವಸತಿ ಶಾಲೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ 9ನೇ ತರಗತಿಯ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ
ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಳೆಹೊನ್ನೂರು ಬನ್ನೂರು ಮೂಲದ ಯಶ್ವಿತ್ ಮತ್ತು ಬೆಂಗಳೂರು ಮೂಲದ ತರುಣ್ ಇಬ್ಬರು ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಹೋಟೆಲ್ ಒಂದರಲ್ಲಿ ಕೆಲಸಕ್ಕೆ ಸೇರಿದ್ದರು ಎನ್ನಲಾಘಿದೆ. ಮಂಗಳೂರಿನಲ್ಲಿ ಹೋಟೆಲ್ ನಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲಾಗಿದೆ.
ವಸತಿ ಶಾಲೆಯಿಂದ ನಾಪತ್ತೆಯಾದ ದಿನ ವಿದ್ಯಾರ್ಥಿಗಳು ಚಿಕ್ಕಮಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇದ್ದುದನ್ನು ಸಿಸಿ ಕ್ಯಾಮೆರಾ ಗಳಲ್ಲಿ ಗುರುತಿಸಲಾಗಿತ್ತು. ನಂತರ ವಿದ್ಯಾರ್ಥಿಗಳು ಮಂಗಳೂರು ಬಸ್ ಹತ್ತಿ ಮಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ.
ಇಬ್ಬರು ವಿದ್ಯಾರ್ಥಿಗಳನ್ನು ಅವರ ಪೋಷಕರ ಸುಪರ್ದಿಗೆ ನೀಡಲಾಗಿದೆ. ವಿದ್ಯಾರ್ಥಿಗಳು ಪ್ರಸ್ತುತ ಇದ್ದ ವಸತಿ ಶಾಲೆಯಲ್ಲಿ ಮುಂದುವರಿಯಲು ನಿರಾಕರಿಸುತ್ತಿದ್ದು, ಬೇರೆಡೆ ವ್ಯಾಸಂಗ ಮಾಡುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳ ನಾಪತ್ತೆ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ವಿದ್ಯಾರ್ಥಿಗಳು ಪತ್ತೆಯಾಗುವ ಮೂಲಕ ಪ್ರಕರಣವು ಸುಖಾಂತ್ಯ ಕಂಡಿದೆ



