oplus_262144

oplus_262144

 

 

ಕಳಸ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ನಡೆದಿದ್ದು ಎರಡೂ ಸ್ಥಾನಗಳಿಗೆ ಜೆಡಿಎಸ್ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ  ಜೆಡಿಎಸ್ ನ ಸುನೀತ ಕುಮಾರಿ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ನ ಭಾಸ್ಕರ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ಉಷಾ ವಿಶ್ವನಾಥ ಹಾಗೂ ಉಪಾಧ್ಯಕ್ಷರಾಗಿದ್ದ ಬಿಜೆಪಿ ಬೆಂಬಲಿತ ರಂಗನಾಥ್ ಅವರು ರಾಜಿನಾಮೆ ನೀಡಿದ್ದರು.
ತೆರವಾಗಿದ್ದ ಸ್ಥಾನಕ್ಕಾಗಿ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸುನೀತ ಕುಮಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಭಾಸ್ಕರ್ ಗೌಡ ನಾಮ ಪತ್ರ ಸಲ್ಲಿಸಿದ್ದರು.

ಬೇರೆ ಯಾರು ನಾಮ ಪತ್ರ ಸಲ್ಲಿಕೆ ಮಾಡದೆ ಇದ್ದ ಕಾರಣ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಸ್ಪಷ್ಟ ಬಹುಮತ ಹೊಂದಿದ್ದ ಕಾರಣ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಸುನೀತ ಕುಮಾರಿ ಮತ್ತು ಭಾಸ್ಕರಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಜೆಡಿಎಸ್, ಬಿಜೆಪಿ, ಸಿಪಿಐ ಮುಖಂಡರುಗಳು, ಚುನಾಯಿತರ ಅಭಿಮಾನಿಗಳು, ಸ್ನೇಹಿತರು, ಕುಟುಂಬ ವರ್ಗದವರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ