bike theft

 

 

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 10.50ಲಕ್ಷ ರೂ. ಮೌಲ್ಯದ 11 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚಿಕ್ಕಮಗಳೂರು ನಗರದ ನಯಾಜ್ ಪಾಷ ಎಂಬುವವರ ಬೈಕ್ ಕಳ್ಳತನವಾಗಿದ್ದು, ಅವರು ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಪೊಲೀಸರು ಹಾಸನ ಹುಣಸಿನಕೆರೆ ನಿವಾಸಿ ಸೈಯದ್ ಇಮ್ಹಾದ್ (23) ಈತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಹನ್ನೊಂದು ಬೈಕ್‌ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಂಧಿತನಿಂದ ಕಳ್ಳತನವಾಗಿದ್ದ ಹನ್ನೊಂದು ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇವುಗಳ ಪೈಕಿ ಆರು ಬೈಕ್‌ಗಳು ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ದೂರು ದಾಖಲಾಗಿದ್ದು ಅವುಗಳಿಗೆ ಸಂಬಂಧಿಸಿದ್ದಾಗಿವೆ. ಒಂದು ಬೈಕ್‌ಗಳು ಬೆಂಗಳೂರು ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ.

ಉಳಿದಂತೆ ನಾಲ್ಕು ಬೈಕ್‌ಗಳು ಬೆಂಗಳೂರು ಒಂದು ಮೈಸೂರು ಒಂದು, ಹಾಸನ ಹೊಳೆನರಸೀಪುರ ಪಟ್ಟಣ ವ್ಯಾಪ್ತಿಯ ಒಂದು, ಒಂದು ಬೈಕ್ ಬೇಲೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಶ್ಲಾಘೀಸಿದ್ದಾರೆ.

ಪೊಲೀಸ್ ತಂಡದಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್, ಪಿಎಸ್ಐ   ಶಂಭುಲಿಂಗನಗೌಡ ಮತ್ತು  ಸತೀಶ್ ಕೆ ಎಸ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ   ನಂಜಪ್ಪ,   ದಿನೇಶ್,   ರವಿ,  ಪ್ರದೀಪ,   ನವೀನ ಎ ಎಸ್,   ಮಂಜುನಾಥ ನಾಯ್ಕ,   ಮಹಮ್ಮದ್ ರಫೀಕ್ ಘಾಟ್ನಿ ಮತ್ತು   ಮುಸ್ತಫಾ ರವರು ಕಾರ್ಯನಿರ್ವಹಿಸಿರುತ್ತಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ