November 1, 2026
;
bank strike

 

 

ಬ್ಯಾಂಕ್‌ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರಾದ್ಯಂತ ಮಾರ್ಚ್ 23ರ ಮಧ್ಯರಾತ್ರಿಯಿಂದ ಮಾರ್ಚ್ 25ರ ಮಧ್ಯರಾತ್ರಿವರೆಗೆ ಬ್ಯಾಂಕ್‌ ಮುಷ್ಕರ ನಡೆಸುವುದಾಗಿ ಬ್ಯಾಂಕ್ ಯೂನಿಯನ್​​ಗಳ ಸಂಯುಕ್ತ ವೇದಿಕೆ ತಿಳಿಸಿದೆ.

ಬೇಡಿಕೆಗಳು:

ವಾರದಲ್ಲಿ ಐದು ದಿನ ಕೆಲಸದ ನೀತಿ ಜಾರಿಗೆ ತರಬೇಕು. ಸರ್ಕಾರಿ ಬ್ಯಾಂಕುಗಳಲ್ಲಿ ವಿವಿಧ ಸ್ತರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಬೇಕು. ಗ್ರಾಚ್ಯುಯಿಟಿ ಹಣಕ್ಕೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ರೂ.25 ಲಕ್ಷಕ್ಕೆ ಹೆಚ್ಚಿಸುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು. ಉದ್ಯೋಗಿಗಳ ಕಾರ್ಯಕ್ಷಮತೆ ಆಧಾರಿತವಾಗಿ ಭತ್ಯೆ ನೀಡುವ ಕ್ರಮದಿಂದ ಉದ್ಯೋಗಿಯ ಕೆಲಸದ ಅಭದ್ರತೆ ಹೆಚ್ಚುತ್ತದೆ, ಉದ್ಯೋಗಿಗಳ ನಡುವಿನ ಸಂಬಂಧ ದುರ್ಬಲಗೊಳ್ಳುತ್ತದೆ. ಹೀಗಾಗಿ, ಇಂತಹ ನಿರ್ದೇಶನಗಳನ್ನು ಹಿಂಪಡೆಯಬೇಕು. ಕೇಂದ್ರ ಹಣಕಾಸು ಸೇವೆಗಳ ಇಲಾಖೆಯು ಸರ್ಕಾರಿ ಬ್ಯಾಂಕುಗಳ ಚಿಕ್ಕಪುಟ್ಟ ವ್ಯವಹಾರದಲ್ಲೂ ಮಧ್ಯಪ್ರವೇಶಿಸುವುದನ್ನು ನಿಲ್ಲಿಸಬೇಕು. ಬ್ಯಾಂಕ್ ಮಂಡಳಿಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಬೇಕೆಂಬುದು ಪ್ರಮುಖ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದರು.

 

 

Leave a Reply

Your email address will not be published. Required fields are marked *