19Mudigere1A

 

 

ಗ್ಯಾರೇಜ್‍ನಲ್ಲಿ ರಿಪೇರಿಯಾಗಿದ್ದ ಕಾರನ್ನು ಟೆಸ್ಟ್ ಡೈವ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ ಘಟನೆ ಮೂಡಿಗೆರೆ ಪಟ್ಟಣ ಸಮೀಪದ ಬಿಳಗುಳ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಪಟ್ಟಣದ ಗ್ಯಾರೇಜ್‍ವೊಂದರಲ್ಲಿ ರಿಪೇರಿ ಬಿಟ್ಟಿದ್ದ ಕಾರನ್ನು ಸರಿಪಡಿಸಿ ಅದನ್ನು ಮಂಗಳವಾರ ರಾತ್ರಿ ಗ್ಯಾರೇಜ್‍ನ ಕೆಲಸಗಾರ ಸಜದ್ ಆಲಿ  ಟೆಸ್ಟ್ ಡ್ರೈವ್ ಮಾಡಲು ಹೊರಟಿದ್ದು, ಈ ಸಂದರ್ಭದಲ್ಲಿ ಇನ್ನಿಬ್ಬರು ಯುವಕರಾದ ಸುಜನ್ ಮತ್ತು ವರ್ಷಿತ್ ಎಂಬುವರನ್ನು ಕಾರಿನಲ್ಲಿ ಕೂರಿಸಿಕೊಂಡು ಮೂಡಿಗೆರೆ ಪಟ್ಟಣದಿಂದ ಬಿಳಗುಳ ರಸ್ತೆಯಲ್ಲಿ ಸಾಗಿದ್ದಾರೆ.

ಕಾರನ್ನು ಅತೀ ವೇಗವಾಗಿ ಚಾಲನೆ ಮಾಡಿದ್ದರಿಂದ ಬಿಳಗುಳ ಸರಕಾರಿ ಶಾಲೆ ಎದುರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ 3 ವಿದ್ಯುತ್ ಕಂಬ ಹಾಗೂ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ಮೂವರು ಯುವಕರಿಗೆ ಸಣ್ಣಪುಟ್ಟ ಗಾಯಗೊಂಡಿದ್ದು, ಪಟ್ಟಣದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, 3 ವಿದ್ಯುತ್ ಕಂಬ ಹಾಗೂ ಟಾಟಾ ಏಸ್ ವಾಹನ ಜಖಂಗೊಂಡಿದೆ. ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ