D_K_Shivakumar_02

 

 

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ   4% ರಷ್ಟು ಮೀಸಲಾತಿ ನೀಡುವುದನ್ನು ಸಮರ್ಥನೆ ನೀಡುವ ಭರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್  ವಾಹಿನಿಯೊಂದರ ಕಾರ್ಯಕ್ರಮದಲ್ಲಿ ನೀಡಿದ ಸಂವಿಧಾನ ಬದಲಾವಣೆ ಹೇಳಿಕೆ ಈಗ ರಾಷ್ಟ್ರಮಟ್ಟದಲ್ಲಿ ವಿವಾದವಾಗಿ ಮಾರ್ಪಟ್ಟಿದೆ.

ಸಂವಿಧಾನದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಸಂವಿಧಾನವನ್ನೇ   ಬದಲಾಯಿಸುವ ತೀರ್ಪುಗಳಿವೆ ಎಂದು ದೆಹಲಿಯಲ್ಲಿ ಖಾಸಗಿ ವಾಹಿನಿಯೊಂದರೆ ಸಂವಾದದಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದರು

ಇದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ ಸೋಮವಾರ ಸಂಸತ್‌ನ ಉಭಯ ಸದನಗಳಲ್ಲಿ ಗದ್ದಲ ಎಬ್ಬಿಸಿತು. ಕಾಂಗ್ರೆಸ್   ನಾಯಕರೊಬ್ಬರು ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಾಂಗ್ರೆಸ್ ಸಂವಿಧಾನವನ್ನು ತುಂಡು ತುಂಡಾಗಿ ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ರಾಜ್ಯಸಭೆಯಲ್ಲಿ ಆರೋಪ ಮಾಡಿದರು. ನಡ್ಡಾ  ಆರೋಪಕ್ಕೆ ಲೆಹರ್ ಸಿಂಗ್ ದನಿಗೂಡಿಸಿದರು.

ನಡ್ಡಾ ಆರೋಪವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ   ಖಂಡಿಸಿದರು. ಇದು ಗದ್ದಲಕ್ಕೆ ಕಾರಣವಾಯ್ತು. ಅತ್ತ ಲೋಕಸಭೆಯಲ್ಲೀ ಇದೇ ವಿಚಾರ ಪ್ರತಿಧ್ವನಿಸಿತು. ಹಿರಿಯ ಕಾಂಗ್ರೆಸ್ ನಾಯಕರೊಬ್ಬರು, ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಿಸ್ತೇವೆ ಎಂದಿದ್ದಾರೆ. ಇದನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಈ ಕೂಡಲೇ ಡಿ.ಕೆ ಶಿವಕುಮಾರ್ ರಾಜೀನಾಮೆ ಪಡೀಬೇಕು ಎಂದು ಕಾನೂನು ಸಚಿವ ಕಿರಣ್ ರಿಜಿಜು ಆಗ್ರಹಿಸಿದರು.

ಇತ್ತ ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಇಷ್ಟುದಿನ ಬಿಜೆಪಿ ಯವರು ಅಂಬೇಡ್ಕರ್ ಅವರು ಬರೆದ ಸಂವಿಧಾನ ಬದಲಾಯಿಸುತ್ತಾರೆ ಎಂದು ಬಿಜೆಪಿ ವಿರುದ್ಧ ಪ್ರಬಲ ಅಸ್ತ್ರ ಬಳಸುತ್ತಿದ್ದ ಕಾಂಗ್ರೇಸ್ ಗೆ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ತಿರುಗುಬಾಣವಾಗಿದ್ದು, ಇದೀಗ ಬಿಜೆಪಿಯವರಿಗೆ ಕಾಂಗ್ರೇಸ್ ಮೇಲೆ ಮುಗಿಬೀಳಲು ದೊಡ್ಡ ಅವಕಾಶ ಸಿಕ್ಕಂತಾಗಿದೆ. ಇದು ಕಾಂಗ್ರೇಸ್ ನವರ ಮುಸ್ಲೀಂ ತುಷ್ಟೀಕರಣದ ಪರಮಾವದಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಡಿಕೆ ಶಿವಕುಮಾರ್ ಹೇಳಿದ್ದೇನು?

ಮುಸ್ಲಿಮರಿಗೆ ಮೀಸಲಾತಿ ನೀಡುವ ಕುರಿತು ಸಾಕಷ್ಟು ಚರ್ಚೆಗಳಾಗುತ್ತಿವೆ. ಮುಸ್ಲಿಮರು ಪಂಕ್ಚರ್ ಹಾಕೋರು ಎಂದು ಬಿಜೆಪಿಯ ಅನೇಕರು ಹೇಳಿದ್ದಾರೆ. ಸಮಾಜದ ಪ್ರತಿಯೊಂದು ವರ್ಗ ಮೇಲಕ್ಕೆತ್ತುವುದು ನಮ್ಮ ಜವಾಬ್ದಾರಿ. ನಾವು ಏನಾದರೂ ಪ್ರಾರಂಭಿಸಿದಾಗ ಎಲ್ಲರೂ ನ್ಯಾಯಾಲಯಕ್ಕೆ ಹೋಗುತ್ತಾರೆ ಎನ್ನುವುದು ಗೊತ್ತಿದೆ. ನ್ಯಾಯಾಲಯದಿಂದ ಯಾವ ತೀರ್ಮಾನ ಬರುತ್ತದೆಯೋ ನೋಡೋಣ. ಒಳ್ಳೆಯ ದಿನಕ್ಕಾಗಿ ಕಾಯೋಣ. ಬಹಳಷ್ಟು ಬದಲಾವಣೆಗಳಿವೆ. ಸಂವಿಧಾನ ಬದಲಾಗಲಿದೆ. ಸಂವಿಧಾನವನ್ನೇ ಬದಲಾಯಿಸುವ ತೀರ್ಪುಗಳಿವೆ ಎಂದು ಹೇಳಿದ್ದರು.

https://x.com/CTRavi_BJP/status/1904085907977728455?ref_src=twsrc%5Etfw%7Ctwcamp%5Etweetembed%7Ctwterm%5E1904085907977728455%7Ctwgr%5E3a5b7a9d5a540a075e531af257fbac1dde4aa864%7Ctwcon%5Es1_c10&ref_url=https%3A%2F%2Fpublictv.in%2Fdk-shivakumars-constitution-change-remark-sparks-row-no-greater-betrayal-bjp-attacks-congress%2F

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ