byduvalli 2

 

 

ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದ ಶ್ರೀ ತ್ರಿಪುರಾಂತಕೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪುನಃಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವ ಕಾರ್ಯಕ್ರಮ ಇಂದಿನಿಂದ ಮೂರುದಿನಗಳ ಕಾಲ ನೆರವೇರಲಿದೆ.

ಬೈದುವಳ್ಳಿ, ಬಾಳೆಗದ್ದೆ, ದಿಣ್ಣೇಕೆರೆ ಗ್ರಾಮದ ಗ್ರಾಮಸ್ಥರು ಸೇರಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ತ್ರಿಪುರಾಂತಕೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನೆರವೇರಿಸಿದ್ದು, ಅದರ ಅಂಗವಾಗಿ ಮಾರ್ಚ್ 25ರಿಂದ 27 ರವರೆಗೆ ಪುನಃಪ್ರತಿಷ್ಠಾ ಬ್ರಹ್ಮ ಕಲಶಾಭಿಷೇಕ ಮಹೋತ್ಸವ ಹಮ್ಮಿಕೊಂಡಿದ್ದಾರೆ.

ಇಂದು ಮಂಗಳವಾರ  ಫಲನ್ಯಾಸ ಗಣಪತಿ ಪೂಜೆ, ಪುಣ್ಯಾಹ, ದೇವನಾಂದಿ, ವಿವಿಧ ಹೋಮ ಮತ್ತು ಪೂಜಾ ಕಾರ್ಯಗಳು ನೆರವೇರಲಿವೆ. ಬುಧವಾರ ಶ್ರೀ ದೇವರ ಪ್ರತಿಷ್ಠೆ, ತತ್ವಕಲಶ ಸ್ಥಾಪನೆ ನೆರವೇರಿಲಿದೆ. ಸಂಜೆ 109 ನವೋತ್ತರ ಶತ ಬ್ರಹ್ಮಕಲಶ ಪ್ರತಿಷ್ಠೆ ಅಧಿವಾಸ ಹೋಮ ನೆರವೇರಲಿದೆ.

ಗುರುವಾರ ಬೆಳಿಗ್ಗೆ ವಿವಿಧ ಹೋಮ ಮತ್ತು ಪೂಜಾ ಕಾರ್ಯಕ್ರಮಗಳು ನೆರವೇರಲಿದ್ದು, ಮಧ್ಯಾಹ್ನ ಅನ್ನ ಸಂತರ್ಪಣೆ ನಂತ್ರ ಮಂತ್ರಕ್ಷತೆ ಕಾರ್ಯಕ್ರಮ ಸಂಜೆ ದೇವರಿಗೆ ರಂಗಪೂಜೆ ಹಾಗೂ ದೇವರ ಉತ್ಸವ ನೆರವೇರಲಿದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಮಹಾಶಯರು ಆಗಮಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನ ಸಮಿತಿಯವರು ಮತ್ತು ಗ್ರಾಮಸ್ಥರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗೆ : 9448185543, 9448185766, 9481651346 ಸಂಖ್ಯೆಗಳಲ್ಲಿ ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ