bettagere

 

 

ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಬುಧವಾರ ಉದ್ಘಾಟನೆ ಮಾಡಲಾಯಿತು.

ಬೆಟ್ಟಗೆರೆ ಗ್ರಾ.ಪಂ. ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಾಸಕಿ ನಯನಾ ಮೋಟಮ್ಮ ; ಗ್ರಾ.ಪಂ. ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಬಹುದು. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರು ಕೂಡ ಅಭಿವೃದ್ಧಿಯತ್ತ ಗಮನ ಹರಿಸಿದರೆ ಜನರ ಸಮಸ್ಯೆಗಳು ನಿವಾರಣೆಯಾಗುತ್ತದೆ. ತನ್ನ ಕ್ಷೇತ್ರ ವ್ಯಾಪ್ತಿಯಲ್ಲಿ 49 ಗ್ರಾ.ಪಂ.ಗಳಿದ್ದು, 1022 ಹಳ್ಳಿಗಳಿವೆ. ಪ್ರತಿ ಹಳ್ಳಿಗಳಲ್ಲಿ ನಾನಾ ರೀತಿಯ ಸಮಸ್ಯೆಗಳಿವೆ. ಅದನ್ನು ಅರಿತು ತನಗೆ ಬರುವ ಶಾಸಕರ ಅನುದಾನವನ್ನು ಎಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸಮನಾಗಿ ಹಂಚಿಕೆ ಮಾಡಿ ಪಕ್ಷಬೇಧ ಮರೆತು, ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದೇನೆಂದು ಹೇಳಿದರು.

ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಯಾವುದೇ ಪಕ್ಷವಾಗಿದ್ದರೂ ಚುನಾವಣೆಯಲ್ಲಿ ಗೆದ್ದ ಬಳಿಕ ಅವರು ಜನಪ್ರತಿನಿಧಿಗಳಾಗುತ್ತಾರೆ. ತಾಲೂಕಿನಲ್ಲಿರುವ ಎಲ್ಲಾ ಗ್ರಾ.ಪಂ. ಸದಸ್ಯರು ಪಕ್ಷ ಬೇಧ ಮರೆತು ಜನರ ಸಮಸ್ಯೆ ನಿವಾರಿಸುವ ಕಾರ್ಯ ಮಾಡಬೇಕು. ಆಗ ಮಾತ್ರ ಗ್ರಾಮಗಳು ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಂತರ ಬೆಟ್ಟಗೆರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸಾರ್ವಜನಿಕ ಬಸ್ ನಿಲ್ದಾಣ ಕಟ್ಟಡ ಉದ್ಘಾಟಿಸಿ, ಜಾರ್ಗಲ್‍ನಲ್ಲಿ ನೂತನ ಅಂಗನವಾಡಿ ಕೇಂದ್ರ ಕಟ್ಟಡವನ್ನು ಉದ್ಘಾಟಿಸಿದರು.

ಬೆಟ್ಟಗೆರೆ ಗ್ರಾ.ಪಂ. ಅಧ್ಯಕ್ಷ ಬಿ.ಕೆ.ದಿನೇಶ್, ಉಪಾಧ್ಯಕ್ಷೆ ಹೂವಮ್ಮ, ಸದಸ್ಯರಾದ ಕೆ.ವಿ.ಗೋಪಾಲಗೌಡ, ಕೆ.ಎನ್.ಕುಮಾರ್, ಸುಶೀಲಾ ದೊಡ್ಡಯ್ಯ, ಸುಂದರಿ ಕೃಷ್ಣಪ್ಪ, ಕಾಂಗ್ರೆಸ್‍ನ ಬಣಕಲ್ ಹೋಬಳಿ ಅಧ್ಯಕ್ಷ ಸುಬ್ರಹ್ಮಣ್ಯ, ತಾ.ಪಂ. ಇಒ ದಯಾವತಿ, ರಾಜೀವ್‍ಗಾಂಧಿ ಸೇವಾ ಕೇಂದ್ರದ ನವೀನ್‍ಕುಮಾರ್, ಪಿಡಿಒ ದರ್ಶನ್, ಕಾರ್ಯದರ್ಶಿ ತೇಜಸ್ವಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ