ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನಲ್ಲಿ ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ತರೀಕೆರೆ ತಾಲ್ಲೂಕಿನ ಗುರುಪುರ ಗ್ರಾಮದ ವೆಂಕಟೇಶ್ (58 ವರ್ಷ) ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ.
ಇಂದು ಸೋಮವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಮುಂಜಾನೆ ಮನೆ ಎದುರಿನ ತೋಟದಲ್ಲಿ ಹಸು ಕಟ್ಟಲು ಹೋದಾಗ ವೆಂಕಟೇಶ್ ಮೇಲೆ ಕಾಡಾನೆ ದಾಳಿ ಮಾಡಿದೆ. ವೆಂಕಟೇಶ್ ಅವರನ್ನು ಸೊಂಡಿಲಿನಲ್ಲಿ ಎತ್ತಿ ತೆಂಗಿನ ಮರಕ್ಕೆ ಬಡಿದಿದ್ದು ಅವರು ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಲು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಭಾಗದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿಯಿದ್ದು, ಲಕ್ಕವಳ್ಳಿ ಸುತ್ತಮುತ್ತಲಿನ ಜರನು ಕಾಡಾನೆ ಹಾವಳಿಯಿಂದ ಜೀವಭಯದಿಂದ ಬದುಕುವಂತಾಗಿದೆ.



