congress

 

 

ಕಾಂಗ್ರೆಸ್ ಶಾಸಕರ ಗೆಲುವಿಗೆ ಕಾರಣ ಕಾರ್ಯಕರ್ತರು, ಕಾರ್ಯಕರ್ತರ ಗೆಲುವಿಗೆ ಕಾರಣ ಪಕ್ಷದ ಸಿದ್ಧಾಂತ, ಆದರೆ ಬಿಜೆಪಿಯವರು ಅಧಿಕಾರಕ್ಕಾಗಿ ಕಾರ್ಯಕರ್ತರ ಮೂಲಕ ಸುಳ್ಳು ಹೇಳಿಸುತ್ತಿದ್ದಾರೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಶನಿವಾರ ಚಿಕ್ಕಮಗಳೂರು ನಗರದ ಟಿಎಂಎಸ್ ಶಾಲಾ ಆವರಣದಲ್ಲಿನ ರೋಟರಿ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸರಕಾರದ ನಡೆ ಕಾರ್ಯಕರ್ತರ ಕಡೆ-ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರ ಸಮಾವೇಶವ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರು ಸಂಕಷ್ಟದಲ್ಲಿ ಸಿಲುಕಿದ್ದ ವೇಳೆ ಚಿಕ್ಕಮಗಳೂರು ಜಿಲ್ಲೆಯಿಂದ ಅವರನ್ನು ಲೋಕಸಭೆಗೆ ಕಳಿಸುವ ಮೂಲಕ ಜಿಲ್ಲೆಯ ಜನತೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ಈ ಹಿಂದೆ ನೀಡಿದ್ದರು. ಹಿಂದಿನಿಂದಲೂ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕೆಲ ಬದಲಾವಣೆಯಾಗಿದ್ದರೂ ಮತ್ತೆ ಜಿಲ್ಲೆ ಎಂದೆಂದಿಗೂ ಕಾಂಗ್ರೆಸ್‌ನ ಭದ್ರಕೋಟೆ ಎಂಬುದನ್ನು ಸಾಭೀತು ಮಾಡಿದವರು ಪಕ್ಷದ ಕರ‍್ಯರ‍್ತರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೆ.ಜೆ.ಜಾರ್ಜ್, ಬಿಜೆಪಿಯವರು ಸುಳ್ಳು ಹೇಳಿ ಕೇಂದ್ರದಲ್ಲಿ ಅಧಿಕಾರ ಪಡೆದುಕೊಂಡಿದ್ದಾರೆ. ವಿದೇಶದಲ್ಲಿರುವ ಕಪ್ಪು ಹಣವನ್ನು ತರುವುದಾಗಿ ಹೇಳಿದ್ದರು. ಅದು ಸಾಧ್ಯವಾಗಿಲ್ಲ. ವರ್ಷಕ್ಕೆ 2 ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಅದು ಸಕಾರಗೊಂಡಿಲ್ಲ. ಕಾಂಗ್ರೆಸ್ ಪಕ್ಷ ದೇಶ ಕಟ್ಟುವಲ್ಲಿ ಶ್ರಮಿಸಿದೆಯೇ ಹೊರತು ದೇಶವನ್ನು ಧರ್ಮದಿಂದ ವಿಭಜಿಸಲು ಎಂದೂ ಮುಂದಾಗಿಲ್ಲ ಎಂದು ಹೇಳಿದರು.

ಕೇಂದ್ರದಲ್ಲಿ ಬಿಜೆಪಿಯವರು ನೀಡಿದ ಸುಳ್ಳು ಭರವಸೆಯನ್ನು ನಂಬಿ ಜನರು ಬಿಜೆಪಿಯವರನ್ನು ಗೆಲ್ಲಿಸಿದರು. ಆದರೆ, ಬಿಜೆಪಿಯವರು ಜನರ ಭರವಸೆಯನ್ನು ಈಡೇರಿಸಿಲ್ಲ. ಅದರ ಫಲವಾಗಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನಕ್ಕೆ ಕುಸಿದ ಬಿಜೆಪಿ ಅಧಿಕಾರಕ್ಕಾಗಿ ಪ್ರಾದೇಶಿಕ ಪಕ್ಷಗಳ ಮುಂದೆ ಮಂಡಿಯೂರುವಂತಾಗಿತ್ತು, ಆದರೆ ನಾವೂ ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟು ಜನರ ಬದುಕಿನ ಸುಧಾರಣೆಗಾಗಿ ರಾಜಕೀಯ ಮಾಡುತ್ತಿದ್ದೇವೆ. ಎಂದಿಗೂ ಹಿಂಬಾಗಿಲಿನಿಂದ ಅಧಿಕಾರ ಹಿಡಿದಿಲ್ಲ, ಜನರ ಬದುಕಿನ ವಿಚಾರಗಳನ್ನು ಮುಂದಿಟ್ಟು ಅಧಿಕಾರ ಪಡೆದಿದ್ದೇವೆ, ಸದ್ಯ ಅಧಿಕಾರದಲ್ಲಿರುವ ರಾಜ್ಯ ಸರಕಾರ ಪಂಚಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕಿನ ಸುಧಾರಣೆಗೆ ಮುಂದಾಗಿದೆ ಎಂದರು.

ಶಾಸಕ ಎಚ್.ಡಿ.ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, 2029ರ ಲೋಕಸಭೆ ಚುನಾವಣೆ ನಂತರ ರಾಹುಲ್ ಗಾಂಧಿಯವರು ಈ ದೇಶದ ಪ್ರಧಾನಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಯವರು. ಹಾಕಿಕೊಟ್ಟ ಕಾರ್ಯಕ್ರಮ ಇಂದಿಗೂ ಶಾಶ್ವತವಾಗಿ ಜನಮಾನಸದಲ್ಲಿ ಉಳಿದಿದೆ. ಈ ಸಂಗತಿಯನ್ನು ಕಾರ್ಯಕರ್ತರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

ಈ ವೇಳೆ ನಗರಸಭೆ ಸದಸ್ಯರಾದ ಮುನೀರ್ ಮತ್ತು ಮಂಜುಳಾ ಅನಿಸಿಕೆ ವ್ಯಕ್ತಪಡಿಸಿದರು. ಸಮಾವೇಶದಲ್ಲಿ ಮಾಜಿ ಸಚಿವ ರಮಾನಾಥ ರೈ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಂ.ಸಂದೀಪ್, ಡಾ.ವಿಜಯಕುಮಾರ್, ಶಿವಮೊಗ್ಗ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ರೇಖಾಹುಲಿಯಪ್ಪಗೌಡ, ಎಚ್.ಎಚ್.ದೇವರಾಜ್, ಮಲ್ಲೇಶ್ ಸ್ವಾಮಿ, ಎಚ್.ಪಿ.ಮಂಜೇಗೌಡ, ಮಹಡಿಮನೆ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ