ckm sports1

 

 

ಕ್ರೀಡೆ ಆರೋಗ್ಯದ ಒಂದು ಭಾಗವಾಗಿದ್ದು, ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.

ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು ಅನೇಕ ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ನೌಕರರು ಕೆಲಸದ ಒತ್ತಡದಲ್ಲಿ ತಮ್ಮ ಕೌಟುಂಬಿಕ ಜೀವನ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಪ್ರತಿದಿನ ವ್ಯಾಯಾಮ, ನಡಿಗೆ, ಯೋಗ ಮಾಡಿ, ಫಿಟ್‌ನೆಸ್ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬರೂ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಆರೋಗ್ಯ ಮುಖ್ಯವಾಗಿದೆ. ಉತ್ತಮವಾದ ಓದು, ವ್ಯಾಯಾಮಗಳು ಮನಸ್ಸಿಗೆ ಉಲ್ಲಾಸ, ವಿಶ್ರಾಂತಿ ನೀಡುತ್ತವೆ. ಖುಷಿಯಿಂದ ಕೆಲಸ ಮಾಡಲು ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಅವರು ಮಾತನಾಡಿ, ಎಲ್ಲಾ ಇಲಾಖೆಯ ನೌಕರರನ್ನು ಒಟ್ಟುಗೂಡಿಸಿದ್ದು, ಈ ಕಾರ್ಯಕ್ರಮ ಸಮಾನತೆಯಿಂದ ಮೂಡಿಬಂದಿದೆ. ನಿರಂತರ ಯೋಗ, ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸುಸ್ಥಿತಿ ಕಾಪಾಡಲು ಸಹಾಯ ಮಾಡುತ್ತವೆ. ಪ್ರತಿ ದಿನ ಯೋಗ, ವಾಕಿಂಗ್ ಮಾಡಬೇಕು ಎಂದು ಅವರು ಹೇಳಿದರು.

ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಅವರು ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಎಂಬುದು ಇಲ್ಲ. ಗೆಲುವು ಸಿಗುತ್ತದೆ ಅಥವಾ ಆ ಕ್ರೀಡೆಯಿಂದ ಹೊಸದನ್ನು ಕಲಿಯುತ್ತೇವೆ. ಆದ್ದರಿಂದ ಗೆಲುವು ಅಥವಾ ಕಲಿಕೆ ಮಾತ್ರ ಕ್ರೀಡೆಯಿಂದ ಸಿಗುತ್ತದೆ. ಕ್ರೀಡೆಗಳು ಪರಸ್ಪರ ವೈಯಕ್ತಿಕ ಸಂಬಂಧ, ಸೌಹಾರ್ದತೆ, ಸಹೋದರತ್ವ ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಾನಂದ ಸ್ವಾಮಿ ಮಾತನಾಡಿ, ಕ್ರೀಡೆ ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಆರೋಗ್ಯವಂತ ಜೀವನಕ್ಕೆ ಕ್ರೀಡೆ ಬಹುಮುಖ್ಯ. ಪ್ರಾಚೀನ ಕಾಲದಿಂದಲೂ ಕ್ರೀಡೆಗೆ ಮಹತ್ವವಾದ ಸ್ಥಾನವನ್ನು ನೀಡಲಾಗಿದೆ. ರಾಮಾಯಣ, ಮಹಾಭಾರತದ ಕಾಲದಲ್ಲಿ ರಾಜರು ಕ್ರೀಡಾಕೂಟಗಳನ್ನು ಏರ್ಪಡಿಸುತ್ತಿದ್ದರು. ಕುಸ್ತಿ, ಬಿಲ್ಲುಗಾರಿಕೆ ಮುಂತಾದವನ್ನು ಕಾಣಬಹುದಾಗಿದೆ ಎಂದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಪ್ರ್ರ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕಿ ಡಾ.ಹೆಚ್.ಪಿ. ಮಂಜುಳಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಬಿ,ಎನ್.ಸುಂದ್ರೇಶ್, ಕಾರ್ಯದರ್ಶಿ ಟಿ. ಪದ್ಮರಾಜ್, ಗೌರವಾಧ್ಯಕ್ಷ ಸಿ.ಎನ್.ಮಂಜುನಾಥ್, ಕೊಪ್ಪ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ, ವಿವಿಧ ತಾಲ್ಲೂಕು ಅಧ್ಯಕ್ಷರು ಹಾಗೂ ವಿವಿಧ ಇಲಾಖೆಗಳ ನೌಕರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ