ಮೂಡಿಗೆರೆ ಬಿಜಿಎಸ್ ವಿಎಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿಯಲ್ಲಿ ಶೇಕಡಾ 99ರಷ್ಟು ಫಲಿತಾಂಶ ಪಡದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂದೇಶ್ ಎಂ.ಆರ್ ತಿಳಿಸಿದ್ದಾರೆ.
2024-25 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 91 ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 90ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡಾ 99ರಷ್ಟು ಫಲಿತಾಂಶ ದಾಖಲಾಗಿರುತ್ತದೆ.
ಇದರಲ್ಲಿ ವಾಣಿಜ್ಯ ವಿಭಾಗದಲ್ಲಿ 37 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶ ಲಭಿಸಿರುತ್ತದೆ ಅದರಲ್ಲಿ 12 ವಿದ್ಯಾರ್ಥಿಗಳು ಅತ್ಯುನ್ನತ ಹಾಗೂ 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಯಾಗಿರುತ್ತಾರೆ.
ಕು. ಈಶ್ವರಿ ಸಿರಿಗಂಧ 590 ಅಂಕ ಪಡೆದು ಶೇ 98.33ರಷ್ಟು ಫಲಿತಾಂಶ ಪಡೆದು ತಾಲೂಕಿಗೆ ಪ್ರಥಮ ಹಾಗೂ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ ಕು. ಸಂಜನಾ 574 ಅಂಕ ಪಡೆದು ಶೇ 95.67ರಷ್ಟು ಫಲಿತಾಂಶ ಪಡೆದಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ 54 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡಾ 99ರಷ್ಟು ಫಲಿತಾಂಶ ದಾಖಲಾಗಿರುತ್ತದೆ. ಅದರಲ್ಲಿ 24 ವಿದ್ಯಾರ್ಥಿಗಳು ಅತ್ಯುನ್ನತ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಯಾಗಿರುತ್ತಾರೆ.
ಕು. ಮಾನ್ಯ ಎಚ್. ಎ. 579 ಅಂಕಗಳನ್ನು ಪಡೆದು ಶೇ 96.5 ರಷ್ಟು ಫಲಿತಾಂಶ ಪಡೆದಿರುತ್ತಾರೆ ಹಾಗು .ಕು. ಕಾವ್ಯಶ್ರಿ ಎಂ.ಡಿ . 567 ಅಂಕಗಳನ್ನು ಪಡೆದು ಶೇಕಡಾ 94.5 ರಷ್ಟು ಫಲಿತಾಂಶ ಪಡೆದಿರುತ್ತಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ನ ಶೃಂಗೇರಿ ಶಾಖೆಯ ಕಾರ್ಯದರ್ಶಿಗಳಾದ ಪರಮಪೂಜ್ಯ ಶ್ರೀ ಶ್ರೀ ಗುಣನಾಥ ಸ್ವಾಮೀಜಿಯವರು ಹಾಗೂ ಕಾಲೇಜಿನ ಪ್ರಾಚಾರ್ಯರಾದ ಸಂದೇಶ್ ಎಂ.ಆರ್ ಮತ್ತು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.



