janivara

 

 

ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ್ದ ಪ್ರಕರಣ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಬೀದರ್ ಜಿಲ್ಲಾಧಿಕಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದು ಅಧಿಕಾರಿಗಳದ್ದೇ ತಪ್ಪು ಎಂದು ಹೇಳಿದ್ದು ಬೀದರ್​ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಮತ್ತು ಕೆಲವು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್​ ಆದೇಶ ಹೊರಡಿಸಿದ್ದಾರೆ.

ಬೀದರ್​ನಲ್ಲಿರುವ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್​ ಚಂದ್ರಶೇಖರ ಬಿರಾದಾರ್ ಹಾಗೂ ಆ ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಅಮಾನತು ಮಾಡಲಾಗಿದೆ. ಬೀದರ್​​ನ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಖಾಸಗೀ ಕಾಲೇಜಾಗಿರುವುದರಿಂದ ಹಾಗೂ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಈ ಆದೇಶ ಹೊರಡಿಸಲಾಗಿದೆ.

ಇದಕ್ಕೂ ಮುನ್ನ ಶಿವಮೊಗ್ಗ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿತರಾಗಿದ್ದ ಇಬ್ಬರು ಹೋಮ್ ಗಾರ್ಡ್ಸ್ ಗಳನ್ನು ಅಮಾನತು ಮಾಡಲಾಗಿತ್ತು. ರಾಜ್ಯ ಬ್ರಾಹ್ಮಣ ಸಭಾದ ನಟರಾಜ್ ಭಾಗವತ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ