Balkrushna 2

 

 

ಕಾರಣಾಂತರದಿಂದ ಲೀಸ್ ಅರ್ಜಿ ಸಲ್ಲಿಸಲು ಸಾಧ್ಯವಾಗದ ಬೆಳೆಗಾರರಿಗೆ ಮತ್ತೊಮ್ಮೆ ಲೀಸ್ ಅರ್ಜಿ ಸಲ್ಲಿಕೆ ಅವಧಿ ಜೂ.30ರವರೆಗೆ ವಿಸ್ತರಣೆ ಮಾಡಬೇಕೆಂದು ಬೆಳೆಗಾರರ ಸಂಘದಿಂದ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು ಬೆಳೆಗಾರ ಸಂಘದ ಅಧ್ಯಕ್ಷ ಬಿ.ಆರ್.ಭಾಲಕೃಷ್ಣ ತಿಳಿಸಿದ್ದಾರೆ.

ಬುಧವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು, ರಾಜ್ಯ ಸರಕಾರ ಪ್ಲಾಂಟೇಶನ್ ಬೆಳೆಗಾರರ ಅನಧಿಕೃತ ಸಾಗುವಳಿಗಳನ್ನು ದೀರ್ಘಾವಧಿ ಲೀಸ್‍ಗೆ ನೀಡಲು ನಿಯಮಗಳನ್ನು ರೂಪಿಸಿದ್ದರಿಂದ ಈ ಪ್ರಕ್ರಿಯೆ ಬೆಳೆಗಾರರಿಗೆ ಅತ್ಯಂತ ಅನುಕೂಲವಾಗಲಿದೆ. ಈಗಾಗಲೇ ಲೀಸ್ ಕುರಿತಾಗಿ ಬೆಳೆಗಾರರಿಂದ ಪ್ರಾಥಮಿಕ ಹಂತದ ಅರ್ಜಿಗಳನ್ನು ಕಂದಾಯ ಇಲಾಖೆ ವತಿಯಿಂದ ಸ್ವೀಕರಿಸಲಾಗಿದೆ. ಆದರೆ ಕಂದಾಯ ಇಲಾಖೆಯಲ್ಲಿ ದಾಖಲಾತಿಗಳ ಅಲಭ್ಯತೆ, ಇಲಾಖೆ ಸಿಬ್ಬಂದಿ ಕೊರತೆ, ಗ್ರಾಮೀಣ ಭಾಗಗಳಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಲು ನೆಟ್ ವರ್ಕ್ ಸಮಸ್ಯೆ ಹೀಗೆ ತಾಂತ್ರಿಕ ತೊಡಕಿನಿಂದಾಗಿ ನಿಗದಿತ ದಿನಾಂಕದೊಳಗೆ ಅನೇಕ ಬೆಳೆಗಾರರು ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ.

ಲೀಸ್ ಅರ್ಜಿ ಸಲ್ಲಿಸದ ಬೆಳೆಗಾರರಿಗೆ ಪುನಃ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಬೇಕು. ಈಗಾಗಲೇ ಲೀಸ್‍ಗಾಗಿ ಬೆಳೆಗಾರರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ಹಾಗೂ ಪರಿಷ್ಕರಣೆಗೆ ಕೂಡಲೇ ಚಾಲನೆ ನೀಡಬೇಕು. ಅಲ್ಲದೇ. ಬೆಳೆಗಾರರ ಐಪಿ ಸೆಟ್‍ನ ವಿದ್ಯುತ್ ಸಂಪರ್ಕದ ಬಾಕಿ ಮೊತ್ತ ಪಾವತಿಗೆ ಕಾಲಾವಕಾಶ ವಿಸ್ತರಿಸುವ ಮೂಲಕ ರಾಜ್ಯ ಸರಕಾರ ಬೆಳೆಗಾರರ ನೆರವಿಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ