begane

 

 

ಹಿರಿಯ ಕಾಂಗ್ರೆಸ್ ಧುರೀಣ, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಚಿವ ಬೇಗಾನೆ ರಾಮಯ್ಯ(90 ವರ್ಷ) ಅವರು ನಿಧನರಾಗಿದ್ದಾರೆ.

ಬೇಗಾನೆ ರಾಮಯ್ಯ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು

ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಬೇಗಾನೆ ರಾಮಯ್ಯ ವಿಧಿವಶರಾಗಿದ್ದಾರೆ.

ಬೇಗಾನೆ ರಾಮಯ್ಯ ಅವರು 1978ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಆ ಬಳಿಕ ಗುಂಡೂರಾವ್ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಶೃಂಗೇರಿ ತಾಲ್ಲೂಕು ಅಡ್ಡಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗಾನೆ ಗ್ರಾಮದ ಬೆಳ್ಳಪ್ಪಗೌಡ ಅವರ ಪುತ್ರರಾದ ರಾಮಯ್ಯ ಕಾನೂನು ಪದವಿ ಪಡೆದಿದ್ದರು.  1972ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 1978 ರಲ್ಲಿ ಮೊದಲ ಪ್ರಯತ್ನದಲ್ಲಿಯೇ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪಧಿಸಿದ್ದಾಗ ಅವರ ಗೆಲುವಿನಲ್ಲಿ ಬೇಗಾನೆ ರಾಮಯ್ಯ ಅವರು ಶ್ರಮಿಸಿದ್ದರು. ಇವರು ಇಂದಿರಾಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಇವರು ಸಚಿವರಾಗಿದ್ದಾಗ ಮಲೆನಾಡು ಭಾಗದಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಎಲ್ಲೆಡೆ ಬೋರ್ ವೆಲ್ ಗಳನ್ನು ಕೊರೆಸಲು ಆದ್ಯತೆ ನೀಡಿದ್ದರು. ಹಾಗಾಗಿ ಜನರು ಇವರನ್ನು ಬೋರ್ ವೆಲ್ ರಾಮಯ್ಯ ಎಂದೇ ಪ್ರೀತಿಯಿಂದ ಕರೆಯುತ್ತಿದ್ದರು.

ಬೇಗಾನೆ ರಾಮಯ್ಯ ಅವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಅವರ ಪುತ್ರಿ ಡಾ.ಆರತಿ ಕೃಷ್ಣ ಅವರು ತಂದೆಯಂತೆಯೇ ಸಾರ್ವಜನಿಕ ಜೀವನದಲ್ಲಿ  ತೊಡಗಿಸಿಕೊಂಡಿದ್ದಾರೆ. ಅನಿವಾಸಿ ಭಾರತೀಯರ ಒಕ್ಕೂಟದ ಸಕ್ರಿಯರಾಗಿದ್ದಾರೆ. ಪ್ರಸ್ತುತ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೃತರ ಅಂತ್ಯಕ್ರಿಯೆ ಶಿವಮೊಗ್ಗ ಸಮೀಪದ ಹೊಸಹಳ್ಳಿ ಗ್ರಾಮದ ಸೀತಾ ಫಾರಂ ನಲ್ಲಿ ಇಂದು (ಶುಕ್ರವಾರ) ನಡೆಯಲಿದೆ ಎಂದು ಅವರ ಪುತ್ರಿ ಡಾ. ಆರತಿ ಕೃಷ್ಣ ಮಾಹಿತಿ ನೀಡಿರುತ್ತಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ